BlogCulturalEconomyEducationEntertainmentFashionHealthHelpHighlightsHuman storiesLifestyleLocal newsOthersSportsTop StoriesTrending

ವಿದ್ಯಾನಗರ, ಸಿದ್ಧಾಪುರ: ಜ್ಞಾನಸರಸ್ವತಿ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Aware others:

ಸಿದ್ದಾಪುರ: ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮನ್ವಯ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದು ವರ್ಲ್ಡ್ ಫೈರ್‌ಫೈಟರ್ ಗೇಮ್ಸ್–2024 (ಡೆನ್ಮಾರ್ಕ್) ಚಿನ್ನದ ಪದಕ ವಿಜೇತ ಅಶ್ವಿನ್ ಸನಿಲ್ ಹೇಳಿದ್ದಾರೆ.

ಅವರು ಜ್ಞಾನಸರಸ್ವತಿ ಸಮೂಹ ಸಂಸ್ಥೆಗಳ ವತಿಯಿಂದ ಸಿದ್ದಾಪುರದ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಯಕ್ಷಗಾನ ಭಾಗವತ ರಾಘವೇಂದ್ರ ಆಚಾರ್ಯ ಜನ್ಸಾಲೆ ಜ್ಞಾನಸರಸ್ವತಿ ಪದವಿಪೂರ್ವ ಕಾಲೇಜಿನ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಸುಮುಖ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್. ಸುರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಿದ್ದಾಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಲತಾ ಶೆಟ್ಟಿ, ಸುಮುಖ ಎಜುಕೇಷನಲ್ ಟ್ರಸ್ಟ್ ಕಾರ್ಯದರ್ಶಿ ಯು. ಪಾಂಡುರಂಗ ಪಡಿಯಾರ್, ಸರ್ಕಾರಿ ಪ್ರೌಢಶಾಲೆ ಸಿದ್ದಾಪುರದ ಮುಖ್ಯೋಪಾಧ್ಯಾಯ ಚಂದ್ರ ಕುಲಾಲ್, ಸಿದ್ದಾಪುರ ಪಂಚಾಯತ್ ಸದಸ್ಯರುಗಳಾದ ಗೋಪಾಲ ಕಾಂಚನ್ ಹಾಗೂ ಭಾಸ್ಕರ ಶೆಟ್ಟಿ, ಉಪ ಪ್ರಾಂಶುಪಾಲ ಹರ್ಷ ಶೆಟ್ಟಿ ಆಜ್ರಿ, ಸರಸ್ವತಿ ವಿದ್ಯಾಲಯದ ಮುಖ್ಯ ಶಿಕ್ಷಕಿ ಶ್ವೇತಾ ಗಣೇಶ್ ಉಪಸ್ಥಿತರಿದ್ದರು.

ಜ್ಞಾನಸರಸ್ವತಿ ಪಿಯು ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೆಗ್ಡೆ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಶ್ವೇತಾ ಗಣೇಶ್ ವಂದಿಸಿದರು. ಕನ್ನಡ ವಿಭಾಗದ ನಾಗರಾಜ್ ನಿರೂಪಿಸಿದರು. ಬಳಿಕ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು.


Aware others:

Leave a Reply

Your email address will not be published. Required fields are marked *

error: Content is protected !!