BlogCulturalEconomyEducationEntertainmentFashionHighlightsHuman storiesLifestyleLocal newsOthersSuccess storiesTop StoriesTrendingWomen Care

ಬಸ್ರೂರು:  ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು – ಅನುಪಮಾ ಎಸ್ ಶೆಟ್ಟಿ 

Aware others:

ಕುಂದಾಪುರ: ಬಸ್ರೂರಿನ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ತನ್ನ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ದಿಗೆ ಒತ್ತು ನೀಡುತ್ತಿದೆ. ಪ್ರತೀ ಶಿಕ್ಷಣಾರ್ಥಿಗಳು ಮತ್ತು ಪೋಷಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಾಲೇಜಿನ ಆಡಳಿತ ಮಂಡಳಿಯ ವ್ಯವಸ್ಥಾಪಕಿ ಅನುಪಮಾ ಎಸ್. ಶೆಟ್ಟಿ ಹೇಳಿದರು. ಅವರು ಬಸ್ರೂರಿನ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ ಅಧಯಕ್ಷತೆ ವಹಿಸಿ ಮಾತನಾಡಿದರು.

ಹೊಸಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಣಜಿತ್ ಕುಮಾರ್ ಶೆಟ್ಟಿ ಮಾತನಾಡಿ, ಶ್ರೀ ಶಾರದಾ ಕಾಲೇಜು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ವಿದ್ಯಾ ದೇಗುಲ ಎಂದರು. ಕಾಲೇಜಿನ ಆಡಳಿತಾಧಿಕಾರಿ ಮತ್ತು  ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಮೋಹನ್ ಕೆ.ಎನ್ ವಾರ್ಷಿಕ ವರದಿ ವಾಚಿಸಿದರು. ಕಾಲೇಜಿನ ಟ್ರಸ್ಟ್ ನ ಅಧ್ಯಕ್ಷ ಕೆ. ಜಯಕರ ಶೆಟ್ಟಿ ಮತ್ತು ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಚರಿಯಬ್ಬ ಬ್ಯಾರಿ ಶುಭ ಹಾರೈಸಿದರು. 

ದೈಹಿಕ ಶಿಕ್ಷಣ ನಿರ್ದೇಶಕ ಸೂರಜ್ ಕುಮಾರ್ ಶೆಟ್ಟಿ ಬಿ ಕ್ರೀಡಾ ಸಾಧಕರ ಪಟ್ಟಿವಾಚಿಸಿದರು.   ಉಪನ್ಯಾಸಕಿ ಪ್ರತಿಮಾ,  ಶ್ರೀಲತಾ ,  ಆಶಾ,  ಶಿಲ್ಪಾ  ವಿವಿಧ ಸ್ಪರ್ಧೆಗಳ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.

ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಚಂದ್ರಾವತಿ ಶೆಟ್ಟಿ ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶರಾವತಿ ವಂದಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!