AccidentBlogCrime newsHighlightsHuman storiesLifestyleLocal newsObituaryOthersTop StoriesTrending

ಖಂಬದಕೊಣೆಯಲ್ಲಿ ಅಪಘಾತ : ಬೈಕ್ ಸವಾರ ಸಾವು ಮತ್ತೊಬ್ಬ ಗಂಭೀರ

Aware others:

ಕುಂದಾಪುರ: ಚಲಿಸುತ್ತಿದ್ದ ಬೈಕಿಗೆ ಟಾಟಾ ಏಸ್ ವಾಹನ ಅಡ್ಡಬಂದ ಪರಿಣಾಮ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಹಿಂಬದಿ ಸವಾರ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ  ಘಟನೆ ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಖಂಬದಕೋಣೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರನನ್ನು ಉಪ್ಪುಂದ ಶಾಲೆಬಾಗಿಲು ಸಮೀಪದ ಫಿಶರೀಸ್ ಕಾಲೋನಿ ನಿವಾಸಿ ಪರಮೇಶ್ವರ ಖಾರ್ವಿ ಎಂಬುವರ ಪುತ್ರ ಭುವನ್ (19) ಎಂದು ಗುರುತಿಸಲಾಗಿದೆ. ಅಲ್ಲಿಯ ನಿವಾಸಿ ಗಿರಿಜಾ ಖಾರ್ವಿ ಅವರ ಪುತ್ರ ಮಧು (20) ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಭುವನ್ ಹಾಗೂ ಮಧು ಅವರು ಬೈಕಿನಲ್ಲಿ ಉಡುಪಿಯಿಂದ ಉಪ್ಪುಂದಕ್ಕೆ ಬರುತ್ತಿದ್ದರು. ಖಂಬದಕೋಣೆಯಲ್ಲಿ ಬರುತ್ತಿದ್ದ ವೇಳೆ ಟಾಟಾ ಏಸ್ ವಾಹನವೊಂದು ಹೆದ್ದಾರಿಯಲ್ಲಿ ಯೂ ಟರ್ನ್ ತೆಗೆದುಕೊಂಡಿದ್ದು, ಬೈಕ್ ನಿಯಂತ್ರಣ ತಪ್ಪಿ ಟಾಟಾ ಏಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಭುವನ್ ಗೆ ತಲೆಯಲ್ಲಿ ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರ ಮಧು ಅವರಿಗೆ ತಲೆ, ಎದೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Aware others:

Leave a Reply

Your email address will not be published. Required fields are marked *

error: Content is protected !!