AccidentBlogCrime newsGovernmentHealthHighlightsHuman storiesLifestyleLocal newsObituaryOthersTop StoriesTrending

ಕುಂದಾಪುರ: ಟಿಪ್ಪರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ದಾರುಣ ಸಾವು

Aware others:

ಕುಂದಾಪುರ: ಮರಳು ತುಂಬಿದ್ದ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಂಗಳೂರು ರಾಷ್ಟ್ರೀಯ ಹೆದ್ದಾರಿ-66ರ ಡಿವೈಡರ್ ಬಳಿ ಬುಧವಾರ ನಡೆದಿದೆ.

ಮೂಲತಃ ಆಲೂರಿನವರಾದ ಪ್ರಸ್ತುತ ಕೋಟೇಶ್ವರದ ಅಂಕದಕಟ್ಟೆ ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಕೃಷ್ಣಮೂರ್ತಿ ಅಡಿಗ (57) ಅವರು ಮೃತ ವ್ಯಕ್ತಿ. ಅವರು ಅಡುಗೆ ಕೆಲಸ ಮಾಡಿಕೊಂಡಿದ್ದರು. ವಾರದ ಹಿಂದೆ ಖರೀದಿಸಿದ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸಲು ಮನೆಯಿಂದ ಹೊರಟವರು ಸರ್ವೀಸ್ ರಸ್ತೆಯಿಂದ ಹೆದ್ದಾರಿಗೆ ತಿರುವು ಪಡೆದಾಗ ಕುಂದಾಪುರ ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಟಿಪ್ಪರ್ ಗುದ್ದಿದ್ದು ರಸ್ತೆಗೆಸೆಯಲ್ಪಟ್ಟ ಅವರ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಆರೋಪಿ ಟಿಪ್ಪರ್ ಚಾಲಕ ಶಶಾಂಕ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌.

ಕುಂದಾಪುರ ನಗರ ಠಾಣೆ ಪೊಲೀಸ್ ನಿರೀಕ್ಷಕ ಜಯರಾಮ ಗೌಡ, ಸಂಚಾರ ಠಾಣೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!