ಕೊಲ್ಲೂರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ
ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭ ದೇವಳದ ಅರ್ಚಕ ಡಾ.ಕೆ.ಎನ್ ನರಸಿಂಹ ಅಡಿಗ ಹಾಗೂ ಕೆ.ವಿ. ಶ್ರೀಧರ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆಯಿದ್ದು, ಹೆಚ್ಚಿನ ಸ್ಥಾನ ಪಡೆಯುವ ವಿಶ್ವಾಸವಿದೆ ಎಂದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಪಕ್ಷೇತರರಾಗಿ ಕಣಕ್ಕಿಳಿಯುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಸದ್ಯ ದೇವರ ದರ್ಶನಕ್ಕಾಗಿ ಆಗಮಿಸಿದ್ದು, ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಆಡಳಿತಾತ್ಮಕ ವಿಚಾರವಾಗಿಯೂ ಪ್ರತಿಕ್ರಿಯಿಸುವುದಿಲ್ಲ ಎಂದರು.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಬಿ.ಎಂ.ಸುಕುಮಾರ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಯು.ಬಿ.ಶೆಟ್ಟಿ, ಅಶೋಕ ಕುಮಾರ್ ಕೊಡವೂರು, ಮಿಥುನ್ ರೈ, ದಿನೇಶ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ಕಾಂಚನ, ಸುರೇಂದ್ರ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಳೆಬೈಲು, ಎಸ್.ರಾಜು ಪೂಜಾರಿ, ಕೆ.ರಮೇಶ ಗಾಣಿಗ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಬೈಂದೂರು ಬ್ಲಾಕ್ ಅರವಿಂದ ಪೂಜಾರಿ, ಎಚ್. ವಿಜಯ್ ಶೆಟ್ಟಿ, ಕೆ.ಬಾಬು ಶೆಟ್ಟಿ ತಗ್ಗರ್ಸೆ, ಶಂಕರ ಪೂಜಾರಿ, ಪ್ರಮುಖರು ಇದ್ದರು. ಕೊಲ್ಲೂರಿನಿಂದ ಸಚಿವರು ಗೋಕರ್ಣ ಕ್ಷೇತ್ರಕ್ಕೆ ತೆರಳಿದರು.
