BlogEducationFashionHighlightsHuman storiesLifestyleLocal newsTop StoriesTrending

ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಯಶಸ್ಸು: ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ ನಲ್ಲಿ ರಾಜೇಂದ್ರ ಭಟ್

Aware others:

ಕುಂದಾಪುರ: ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದ ಜೊತೆಗೆ ಧನಾತ್ಮಕ ಚಿಂತನೆಯ ಮನೋಭಾವ ಬೆಳೆಸಿಕೊಂಡರೆ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ರಾಷ್ಟ್ರ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರ ರಾಜೇಂದ್ರ ಭಟ್ ಹೇಳಿದರು.

ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿರುವ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ಜನವರಿ 12 ರಂದು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ “ ಹದಿಹರೆಯದವರ ಮನಸ್ಸುಗಳ ಸಬಲೀಕರಣ (ಎಂಪವರಿಂಗ್ ಯಂಗ್ ಮೈಂಡ್ಸ್) ಎಂಬ ವಿಶೇಷ ಕಾರ್ಯಾಗಾರದಲ್ಲಿ ಮಾತನಾಡಿದರು.

ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಕೇವಲ ಪಠ್ಯ ಶಿಕ್ಷಣ ನೀಡಿದರೆ ಸಾಲದು. ಆಧುನಿಕ ಜೀವನದ ಸವಾಲುಗಳನ್ನು ಎದುರಿಸಲು ಮೌಲ್ಯಾಧಾರಿತ ಶಿಕ್ಷಣದ ಅಗತ್ಯವಿದೆ. ಇಂತಹ ಕಾರ್ಯಾಗಾರಗಳ ಮೂಲಕ ವಿದ್ಯಾರ್ಥಿಗಳ ಮಾನಸಿಕ ಸಾಮರ್ಥ್ಯ ವೃದ್ಧಿಸಲು ನಮ್ಮ ಸಂಸ್ಥೆ ಸದಾ ಬದ್ಧವಾಗಿದೆ ಎಂದರು.

ಈ ಸಂದರ್ಭ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಸುಜ್ಞಾನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಂಜನ್ ಬಿ. ಶೆಟ್ಟಿ, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರದೀಪ್ ಉಪಸ್ಥಿತರಿದ್ದರು. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥ ವಿನಯ ಕುಮಾರ್ ಕೆ. ನಿರೂಪಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!