ಕುಂದಾಪುರ: ರೆಡ್ ಕ್ರಾಸ್ ಸಂಸ್ಥೆಯ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು- ಜಯಕರ ಶೆಟ್ಟಿ ಅಭಿಮತ
ಕುಂದಾಪುರ: ದೇಶದ ಉದ್ದಗಲಕ್ಕೂ ಹಲವಾರು ಜನಪರ, ಜನಹಿತ ಕಾರ್ಯಗಳನ್ನು ಮಾಡುತ್ತಾ ಬಂದಿರುವ ರೆಡ್ ಕ್ರಾಸ್ ಸಂಸ್ಥೆಯ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕದ ಅಧ್ಯಕ್ಷ ಜಯಕರ ಶೆಟ್ಟಿ ಹೇಳಿದರು.

ಅವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕ, ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಸರೆಯಲ್ಲಿ ನಡೆದ ಪ್ರಥಮ ಚಿಕಿತ್ಸೆ ಮತ್ತು ಆರೋಗ್ಯ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಸಂಪನ್ಮೂಲ ವ್ಯಕ್ತಿ ಡಾ. ಸೋನಿ ಡಿಕೋಸ್ತಾ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆಯ ಅಗತ್ಯ, ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕದ ಕೋಶಾಧಿಕಾರಿ ಶಿವರಾಮ್ ಶೆಟ್ಟಿ, ಕಾಲೇಜಿನ ಉಪಪ್ರಾಂಶುಪಾಲ ರಮೇಶ್ ಪೂಜಾರಿ, ಹೆಮ್ಮಾಡಿಯ ಪ್ರಗತಿ ಮಹಿಳಾ ವಿವಿದೋದ್ದೇಶ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕರಾದ ರಾಘವೇಂದ್ರ ಕುಲಾಲ್ ಹೆಮ್ಮಾಡಿ ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲ ರಮೇಶ್ ಪೂಜಾರಿ ಸ್ವಾಗತಿಸಿದರು. ಉಪನ್ಯಾಸಕ ಅಲ್ತಾರು ನಾಗರಾಜ್ ನಿರೂಪಿಸಿದರು.

