AccidentBlogCrime newsEconomyHighlightsHuman storiesLifestyleLocal newsOthersTechTop StoriesTrending

ಹೆಮ್ಮಾಡಿ–ಕೊಲ್ಲೂರು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ: ಕ್ಷಣಾರ್ಧದಲ್ಲಿ ಸಂಪೂರ್ಣ ಭಸ್ಮ

Aware others:

ಕುಂದಾಪುರ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇದ್ದಕ್ಕಿದ್ದಂತೆ ಕಾರು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಶನಿವಾರ ಬೆಳಿಗ್ಗೆ ವಂಡ್ಸೆ ಗ್ರಾಮದ ಶಾರ್ಕೆ ಕ್ರಾಸ್ ಸಮೀಪ ಹೆಮ್ಮಾಡಿ–ಕೊಲ್ಲೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಬೀಜಾಡಿ ನಿವಾಸಿ ಭಾಸ್ಕರ್ ಆಚಾರ್ ಅವರು ಕಾರ್ಯನಿಮಿತ್ತ ಬೆಳಿಗ್ಗೆ ತಮ್ಮ ಕಾರಿನಲ್ಲಿ ಆಲೂರಿಗೆ ತೆರಳಿದ್ದರು. ಬಳಿಕ ಸುಮಾರು ಬೆಳಿಗ್ಗೆ 10 ಗಂಟೆಯ ವೇಳೆಗೆ ಅಲ್ಲಿಂದ ಕುಂದಾಪುರದತ್ತ ತೆರಳುತ್ತಿದ್ದರು. ಈ ವೇಳೆ ಕಾರಿನ ಮುಂಭಾಗದಿಂದ ಶಬ್ದ ಸಹಿತವಾಗಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಭಾಸ್ಕರ್ ಆಚಾರ್ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಹೊರಬಂದಿದ್ದಾರೆ. ಆದರೆ ಕೆಲವೇ ಕ್ಷಣಗಳಲ್ಲಿ ಬೆಂಕಿ ಹೆಚ್ಚಾಗಿದ್ದು, ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗದೆ ಇಡೀ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ವಾಹನ ಸಂಪೂರ್ಣ ಸುಟ್ಟು ಹೋಗಿದ್ದು, ಘಟನೆಗೆ ಕಾರಣ ಏನೆಂಬುದರ ಕುರಿತು ಪರಿಶೀಲನೆ ನಡೆಯುತ್ತಿದೆ.


Aware others:

Leave a Reply

Your email address will not be published. Required fields are marked *

error: Content is protected !!