ಅವಹೇಳನಕಾರಿ ಪೋಸ್ಟ್ : ಬೆಂಗಳೂರಿನ ಆರೋಪಿಯನ್ನು ಬಂಧಿಸಿದ ಕುಂದಾಪುರ ಪೊಲೀಸರು
ಕುಂದಾಪುರ: ಪತ್ರಿಕೆಯೊಂದರ ಫೇಸ್ ಬುಕ್ ಪೇಜಿನಲ್ಲಿ ಪ್ರಕಟಿಸಲಾ ವರದಯೊಂದಕ್ಕೆ ಅವಾಚ್ಯ ಶಬ್ಧಗಳಿಂದ ಕಮೆಂಟ್ ಮಾಡಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ಮತ್ತಿಕೆರೆ ನಿವಾಸಿ ಶಿವರಾಮ್ ಕೆ ಎಂಬಾತನ ಮಗ ಪ್ರಕಾಶ್ ಎಸ್ (45) ಎಂದು ಗುರುತಿಸಲಾಗಿದೆ.

ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಪತ್ರಿಕೆಯೊಂದರ ಫೇಸ್ ಬುಕ್ ಪೇಜಿನಲ್ಲಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ನಲ್ಲಿ ತರಕಾರಿ ವ್ಯಾಪಾರ ಮಾಡುವ ಮಹಮ್ಮದ್ ರವರ ಸಂದರ್ಶನದ ಕುರಿತು ರಂಜಾನ್ ಕಥೆಯ ಇಂದಿನ ಹೀರೋ ಮಂಗಳೂರಿನ ಮಹಮ್ಮದ್ ಎಂಬ ವರದಿ ಪ್ರಕಟಿಸಲಾಗಿತ್ತು. ಈ ವರದಿಗೆ ಹೆಮ್ಮೆಯ ಕಾರ್ಯಕರ್ತ ಎಂಬುವ ಖಾತೆಯಿಂದ ಅವಾಚ್ಯ ಕಮೆಂಟ್ ಬಂದಿತ್ತು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಲಾಗಿತ್ತು.
ಪ್ರಕರಣದ ತನಿಖೆಯನ್ನು ಮುಂದುವರಿಸಿದ ಕುಂದಾಪುರ ಪೊಲೀಸರು ಆರೋಪಿ ಪ್ರಕಾಶ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
