BlogEntertainmentFashionHighlightsHuman storiesLifestyleLocal newsOthersReligionState newsTop StoriesTrending

ಪತ್ನಿ ಪುತ್ರಿಯೊಂದಿಗೆ ಕೊಲ್ಲೂರು ದೇವಸ್ಥಾನಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಭೇಟಿ

Aware others:

ಕುಂದಾಪುರ: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಗಳೊಂದಿಗೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬೆಳಿಗ್ಗೆ ಕ್ಷೇತ್ರಕ್ಕೆ ಆಗಮಿಸಿದ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ದೇವಿಗೆ ವಿಶೇಷ ಪೂಜೆ, ಅರ್ಚನೆ ಹಾಗೂ ಸೇವೆಗಳನ್ನು ಸಲ್ಲಿಸಿದರು. ದೇವಿಯ ರಥವನ್ನು ಭಕ್ತಿಭಾವದಿಂದ ಎಳೆದರು.

ಪೂಜೆಯ ನಂತರ ದೇವಿಗೆ ಪ್ರಾರ್ಥನೆ ಸಲ್ಲಿಸಿ, ಕುಟುಂಬದ ಕಲ್ಯಾಣ ಹಾಗೂ ಸಮಾಜದ ಹಿತಕ್ಕಾಗಿ ಆಶೀರ್ವಾದ ಪ್ರಾರ್ಥಿಸಿದರು

ತವರಿನಲ್ಲಿ ನೆಲೆಸಿರುವ ರಿಷಬ್ ಶೆಟ್ಟಿ ಅವರು ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು, ಸರಳತೆ ಮತ್ತು ಭಕ್ತಿಭಾವದಿಂದ ಎಲ್ಲರಿಗೂ ಮಾದರಿಯಾಗಿದ್ದಾರೆ. ದೇವಿಯ ದರ್ಶನದ ಬಳಿಕ ರಿಷಬ್ ಶೆಟ್ಟಿ ದಂಪತಿಯನ್ನು ಕ್ಷೇತ್ರದ ಆಡಳಿತ ಮಂಡಳಿಯ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಸಿಬ್ಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!