BlogCulturalEconomyElectionEntertainmentFashionHighlightsHuman storiesLifestyleLocal newsOthersPoliticsSuccess storiesTop StoriesTrending

ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಉದಯ ಶಂಕರ್ ಆಯ್ಕೆ

Aware others:

ಬೈಂದೂರು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬೈಂದೂರು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದಯ ಶಂಕರ್ ಪಡಿಯಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಾಮ ಬಿಜೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ  ಆಸ್ಟ್ರೋ  ಮೋಹನ್ ಅಧ್ಯಕ್ಷತೆಯಲ್ಲಿ ಶನಿವಾರ ಬೈಂದೂರು ಪ್ರವಾಸಿ ಬಂಗಲೆಯಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ವಿಜಯವಾಣಿಯ ನರಸಿಂಹ ನಾಯಕ್, ಕೋಶಾಧಿಕಾರಿಯಾಗಿ ಉದಯವಾಣಿಯ ಕೃಷ್ಣ ಬಿಜೂರು ಮತ್ತು ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ವಿಫೋರ್ ನ್ಯೂಸ್‌ನ ಜಯಪ್ರಕಾಶ್ ವಿ. ಅವಿರೋಧವಾಗಿ ಆಯ್ಕೆಯಾದರು. 

ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸಹಕರಿಸಿದರು. ಈ ಸಂದರ್ಭದಲ್ಲಿ ಸಂಘದ ರಾಷ್ಟಿಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!