AccidentBlogCrime newsEducationEntertainmentFashionGovernmentHealthHighlightsHuman storiesLifestyleLocal newsNational NewsOthersState newsTop StoriesTrending

ಕುಂದಾಪುರ ಗ್ರಾಮಾಂತರ ಪಿಎಸ್‌ಐ ನಾಸೀರ್ ಹುಸೇನ್ ಹೃದಯಾಘಾತದಿಂದ ಹಠಾತ್ ನಿಧನ !?

Aware others:

ಕುಂದಾಪುರ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆ (ಕಂಡ್ಲೂರು) ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತಿದ್ದ ನಾಸೀರ್ ಹುಸೇನ್ (58) ಅವರು ಇಂದು ಬೆಳಿಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ “ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಫ್ರೀ ಫಿಟ್ನೆಸ್, ಡ್ರಗ್ಸ್ ಫ್ರೀ ಕರ್ನಾಟಕ” ಮ್ಯಾರಥಾನ್ ನಲ್ಲಿ ಪಾಲ್ಗೊಂಡು ಓಡುತಿದ್ದ ಸಂದರ್ಭದಲ್ಲೇ ದಿಢೀರ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ!!

ಬಿದ್ದ ಸ್ಥಳದಲ್ಲಿಯೇ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಸಬ್ ಇನ್ಸ್ಪೆಕ್ಟರ್ ನಾಸೀರ್ ಹುಸೇನ್ ಅವರನ್ನು ಕೂಡಲೇ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಪೊಲೀಸ್ ಇಲಾಖೆಗೆ ಸೇರುವ ಮೊದಲು ಭಾರತೀಯ ಸೈನ್ಯದಲ್ಲೂ ಸೇವೆ ಸಲ್ಲಿಸಿದ್ದ ನಾಸಿರ್ ಹುಸೇನ್ ಅವರು ಮೂಲತಃ ಚಿಕ್ಕಮಗಳೂರು ಜಿಲ್ಲೆಯವರು. ಸೇನಾ ನಿವೃತ್ತಿಯ ಬಳಿಕ ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ, ಕುಂದಾಪುರ ಗ್ರಾಮಾಂತರ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿ ಜನಮನ್ನಣೆ ಗಳಿಸಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!