BlogCulturalEconomyEducationEntertainmentFashionHighlightsHuman storiesLifestyleLocal newsOthersSuccess storiesTop StoriesTrendingWomen Care

ಸಾಸ್ತಾನ ಲೀಲಾವತಿ ಗಂಗಾಧರ ಅವರಿಗೆ ಪಂಚವರ್ಣ ಮಹಿಳಾ ಮಂಡಲದ ವಿಶ್ವಮಹಿಳಾ ಪುರಸ್ಕಾರ

Aware others:

ಮಹಿಳೆಯಿಂದ ದೇಶ ಸುಭದ್ರ- ಶ್ರೀಲತಾ ಸುರೇಶ್ ಶೆಟ್ಟಿ

ಕೋಟ: ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮಹ್ತರವಾದದ್ದು ಎನ್ನುವುದಕ್ಕೆ ದೇಶದ ವಿವಿಧ ಹುದ್ದೆಗಳನ್ನು ಅಲಂಕರಿಸಿದ ಮಹಿಳಾ ಮಣಿಗಳ ಕಾರ್ಯವೈಖರಿಯೇ ಸಾಕ್ಷಿ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು.

??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಸೋಮವಾರ ಕೋಟದ ಸಮುದ್ಯತಾ ಬ್ಯಾಂಕೇಟ್ ಹಾಲ್‌ನಲ್ಲಿ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲ ಇವರ ಮಾರ್ಗದರ್ಶನ, ಸಮುದ್ಯತಾ ಗ್ರೂಪ್ಸ್ ಸಮೂಹ ಸಂಸ್ಥೆ ಸಹಕಾರ ಹಾಗೂ ಸ್ನೇಹಕೂಟ ಮಣೂರು ಇವರ ಸಹಯೋಗದೊಂದಿಗೆ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದ ಒಟ್ಟು ವ್ಯವಸ್ಥೆಯಲ್ಲಿ ಮಹಿಳೆಯರ ಪಾತ್ರ ಅಮೋಘ. ದೇಶದ ಮೊದಲ ಮುಖ್ಯ ನ್ಯಾಯಧೀಶೆಯ ಹುದ್ದೆಯಲ್ಲಿ ಮಹಿಳೆಗೆ ಸ್ಥಾ ಸಿಗಬೇಕಿದೆ ಎಂದವರು, ಪಂಚವರ್ಣ ಸಂಸ್ಥೆಯ ಮೂಲಕ ಮಹಿಳಾ ಸಾಧಕರನ್ನು ಗುರುತಿಸುವ ಕಾರ್ಯ ಶ್ರೇಷ್ಠವಾದದ್ದು ಎಂದರು.

ಸಾಲಿಗ್ರಾಮ ಪಟ್ಟಣಪಂಚಾಯತ್ ಮಾಜಿ ಅಧ್ಯಕ್ಷೆ ಸುಲತಾ ಎಸ್ ಹೆಗ್ಡೆ  ಅಭಿನಂದನಾ ನುಡಿಗಳನ್ನಾಡಿ, ಮಹಿಳೆ ಇಂದು ಬಹು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾಳೆ. ಸಾಮಾಜಿಕ ಕಾರ್ಯದಲ್ಲಿ ಪುರುಷರಂತೆ ಮಹಿಳೆ ಕೂಡಾ ಮುಂಚೂಣಿಯ ಹೆಜ್ಜೆ ಇರಿಸಿದ್ದಾಳೆ. ಲೀಲಾವತಿ ಗಂಗಾಧರರವರನ್ನು ಗುರುತಿಸಿದ ಪಂಚವರ್ಣ ಕಾರ್ಯ ಶ್ಲಾಘನೀಯ ಎಂದರು.

ಇದೇ ಸಂದರ್ಭ ಪಂಚವರ್ಣ ಸಾಧಕ ಮಹಿಳಾ ಪುರಸ್ಕಾರವನ್ನು ಪಾಂಡೇಶ್ವರ ಲೀಲಾವತಿ ಗಂಗಾಧರ ಪೂಜಾರಿ ಇವರಿಗೆ ಪ್ರದಾನಿಸಲಾಯಿತು. ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸ್ನೇಹಕೂಟ ಮಣೂರು ಇದರ ಅಧ್ಯಕ್ಷೆ ಭಾರತಿ ವಿ ಮಯ್ಯ ಉದ್ಘಾಟಿಸಿ ಶುಭಹಾರೈಸಿದರು.

ಸಾಸ್ತಾನ ಮಹಿಳಾ ಮಂಡಲದ ಅಧ್ಯಕ್ಷೆ ಸುಮಿತ್ರಾ ಸುಧಾಕರ್, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ ಪ್ರಾಸ್ತಾವಿಸಿದರು.ಸದಸ್ಯೆ ಜಯಂತಿ ಕೋಟ್ಯಾನ್ ಪ್ರಾರ್ಥಿಸಿ, ಸ್ನೇಹಕೂಟದ ವಿನಯ ಉಡುಪ ಸನ್ಮಾನ ಪತ್ರ ವಾಚಿಸಿದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರ, ಪ್ರ.ಕಾರ್ಯದರ್ಶಿ ವಸಂತಿ ಹಂದಟ್ಟು ವಂದಿಸಿದರು. ದಿನೇಶ್ ಆಚಾರ್, ಪುಷ್ಭ ಹಂದಟ್ಟು ಸಹಕರಿಸಿದರು. ನೀಡಿತು.


Aware others:

Leave a Reply

Your email address will not be published. Required fields are marked *

error: Content is protected !!