ಕುಂದಾಪುರ : ಹೆಚ್.ಎಂ.ಎಂ, ವಿ.ಕೆ.ಆರ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2026 ಮಕ್ಕಳ ಸಂತೆ

ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2026 ಸೀಸನ್ 4 ಬೇಸಿಗೆ ಶಿಬಿರದ 5ನೇ ದಿನದಂದು ಮಕ್ಕಳ ಸಂತೆ ನಡೆಯಿತು.

ಶ್ರೀ ಕ್ಷೇತ್ರ ಕೊಲ್ಲೂರು ಇದರ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ ಮಖ್ಯ ಅತಿಥಿಗಳಾಗಿ ಆಗಮಿಸಿ, ಮಕ್ಕಳು ಹಾಗೂ ಪೋಷಕರನ್ನು ಉದ್ದೇಶಿಸಿ ಕೃಷಿ ದೇಶದ ಬೆನ್ನೆಲುಬು, ಪ್ರತಿಯೊಬ್ಬರು ನಿಮ್ಮ ಮಕ್ಕಳಿಗೆ ಕೃಷಿ ಚಟುವಟಿಕೆಗಳಲ್ಲಿ ನಿಮ್ಮೊಂದಿಗೆ ನಿಮ್ಮ ಮಕ್ಕಳು ಪಾಲ್ಗೊಳ್ಳುವಂತೆ ಅವರನ್ನು ಪ್ರೋತ್ಸಾಹಿಸಿ ಎಂದರು.

ಪ್ರಾಥಮಿಕ ವಿಭಾಗದ ಮಖ್ಯ ಶಿಕ್ಷಕ ಜಗದೀಶ್ ಆಚಾರ್ ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದರ್ಶಿ ಶ್ರೀಯುತ ಸೀತಾರಾಮ್ ನಕ್ಕತ್ತಾಯ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮಕ್ಕಳು ತಾವು ತಂದಿರುವ ವಿವಿಧ ತಿಂಡಿ – ತಿನಿಸುಗಳು, ಹಣ್ಣು – ತರಕಾರಿಗಳು ವಿವಿಧ ಬಗೆಯ ಔಷಧೀಯ ಸಸ್ಯಗಳನ್ನು ಮಾರಾಟ ಮಾಡಿ ಹಣ ಸಂಗ್ರಹಿಸುವುದರು. ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಹಾಗೂ ಎಲ್ಲಾ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು ಕಾರ್ಯಕ್ರಮವನ್ನು ಶಿಕ್ಷಕಿ ಕವಿತಾ .ಪಿ ನಿರೂಪಿಸಿ ವಂದಿಸಿದರು.

