ವಂಡ್ಸೆ: ಪಾದಾಚಾರಿ ಮಹಿಳೆಗೆ ಕಾರು ಡಿಕ್ಕಿ : ಮಹಿಳೆ ಸಾವು
ಕುಂದಾಪುರ: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಲಿಯಾದ ಪರಿಣಾಮ ಡಿಕ್ಕಿಹೊಡೆಸಿಕೊಂಡ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ವಂಡ್ಸೆಯಲ್ಲಿ ನಡೆದಿದೆ. ವಂಡ್ಸೆಯಲ್ಲಿ ಹಿಟ್ಟಿನ ಗಿರಣಿ ನಡೆಸುತ್ತಿದ್ದ ಶಶಿಕಲಾ ಮೊಗವೀರ (50) ಎಂಬುವರೇ ಅಪಘಾತದಲ್ಲಿ ಸಾವನ್ನಪ್ಪಿದವರು ಎಂದು ತಿಳಿದುಬಂದಿದೆ.

ಮಂಗಳವಾರ ಸಂಜೆ ವಂಡ್ಸೆಯ ಸರ್ಕಾರೀ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ದಿನಸಿ ಖರೀದಿಸಲೆಂದು ಶಶಿಕಲಾ ಬಂದಿದ್ದರು. ಅದೇ ಸಂದರ್ಭ ರಸ್ತೆಯ ಇನ್ನೊಂದು ಪಕ್ಕದಲ್ಲಿ ಶಶಿಕಲಾ ಅವರ ಸಂಬಂಧಿಕರೊಬ್ಬರನ್ನು ಕಂಡು ಇದ್ದಕ್ಕಿದ್ದಂತೆ ರಸ್ತೆ ದಾಟಲು ಯತ್ನಿಸಿದ್ದಾರೆ ಎನ್ನಲಾಗಿದೆ. ಇದೇ ಸಂದರ್ಭ ಚಿತ್ತೂರು ಕಡೆಯಿಂದ ವಂಡ್ಸೆ ಕಡೆಗೆ ಮಾರಣಕಟ್ಟೆ ಸಮೀಪದ ನಿವಾಸಿ ಸುಖೇಶ್ ಶೆಟ್ಟಿ ಎಂಬುವರು ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿದೆ.
ಮೃತ ಶಶಿಕಲಾ ಅವರು ಪತಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
