BlogEntertainmentHighlightsHuman storiesLifestyleLocal newsOthersPoliticsState newsTop StoriesTrending

ಮಾಜೀ ಮುಖ್ಯಮಂತ್ರಿ ಬಿ.ಎಸ್.ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಕುಂದಾಪುರ ಬಿಜೆಪಿಯಿಂದ ಪೂರ್ವಭಾವಿ ಸಭೆ

Aware others:

ಕುಂದಾಪುರ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ರಾಜಕೀಯ ಜೀವನದ ಐವತ್ತು ವರ್ಷ ಪೂರೈಸಿದ ಹಿನ್ನೆಲೆ ಅವರ ಅಭಿಮಾನೋತ್ಸವದ ಕಾರ್ಯಕ್ರಮಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಚಿತ್ರದುರ್ಗಕ್ಕೆ ಹೊರಡುವ ಬಗ್ಗೆ ಕುಂದಾಪುರ ಬಿಜೆಪಿ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿಯವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಇತ್ತಿಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶವು ದೇಶದ ಕಾರ್ಯಕರ್ತರ ಗೆಲ್ಲುವಾಗಿದೆ ಎಂದು ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಹೇಳಿದರು.  ಇದೇ ಸಂದರ್ಭದಲ್ಲಿ ಬೀಜಾಡಿ ಮೀನುಗಾರಿಕಾ ಸೊಸೈಟಿ ನೂತನ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ನಾಗೇಶ್ ಬೀಜಾಡಿ ಇವರನ್ನು ಭಾರತೀಯ ಜನತಾ ಪಾರ್ಟಿಯ ವತಿಯಿಂದ  ಸನ್ಮಾನಿಸಲಾಯಿತು.

ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ ಎಸ್ ಸ್ವಾಗತಿಸಿದರು. ಓಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ವಂದಿಸಿದರು. ಮಂಡಲ ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಮಂಡಲ ಉಪಾಧ್ಯಕ್ಷ ಪ್ರಕಾಶ್ ಜಿ ಪೂಜಾರಿ, ಉಪಸ್ಥಿತರಿದ್ದರು. ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ತಾಲೂಕ್ ಪಂಚಾಯತ್ ಜಿಲ್ಲಾ ಪಂಚಾಯಿತಿ, ಪುರಸಭೆ, ಪಟ್ಟಣ ಪಂಚಾಯತ್, ಗ್ರಾಮ ಪಂಚಾಯತ್ ನಮಾಜಿ ಸದಸ್ಯರು, ಪಕ್ಷದ ಮುಖಂಡರು, ಸೇರಿದಂತೆ ಇನ್ನಿತರರು ಹಾಜರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!