BlogEconomyEducationEntertainmentFashionGovernmentHighlightsHuman storiesLifestyleLocal newsOthersPoliticsState newsTechTop StoriesTrending

ಕುಂದಾಪುರ: ನಾಳೆ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ

Aware others:

ಕುಂದಾಪುರ: ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಹರಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯನ್ನು ನಾಳೆ ದಿನಾಂಕ: 21-05-2026 ರಂದು ಪೂರ್ವಾಹ್ನ 11.00 ಕ್ಕೆ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸಭೆಯಲ್ಲಿ 23-04-2020 ರಂದು ನಡೆದ ಗ್ಯಾರಂಟಿ ಯೋಜನೆ ಸಭೆಯ ನಡವಳಿ ಮೇಲೆ ತೆಗದುಕೊಂಡ ಕ್ರಮಗಳು, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಪ್ರಗತಿ ಪರಿಶೀಲನೆ ಸೇರಿದಂತೆ ಅಧ್ಯಕ್ಷರ ಅನುಮತಿ ಮೇರೆಗೆ ಇತರೆ ವಿಷಯಗಳು ಚರ್ಚೆಗೆ ಬರಲಿವೆ ಎಂದಿರುವ ಹರಿಪ್ರಸಾದ್ ಶೆಟ್ಟಿ, ಸಮಿತಿಯ ಸದಸ್ಯರುಗಳು ಹಾಜರಾಗುವಂತೆ ತಿಳಿಸಿದ್ದಾರೆ. ಮತ್ತು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಇಲಾಖಾ ಅನುಷ್ಠಾನಾಧಿಕಾರಿಗಳು ಗ್ಯಾರಂಟಿ ಯೋಜನೆಗಳ ಪೂರ್ಣ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!