AccidentAuto worldBlogCrime newsHighlightsHuman storiesLifestyleLocal newsObituaryTop StoriesTrending

ಕೋಟೇಶ್ವರ: ಬೈಕ್​ಗೆ ಕಂಟೇನರ್ ಲಾರಿ ಡಿಕ್ಕಿ – ಸವಾರ ಸಾವು

Aware others:

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೋಟೇಶ್ವರ ಅಂಡರ್‌ಪಾಸ್ ನಲ್ಲಿ ಸೋಮವಾರ ಸಂಜೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಂಟೈನರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರನನ್ನು ಗಾರೆ ಕಾರ್ಮಿಕ ಮಾರ್ಕೋಡು ನಿವಾಸಿ (38) ಎಂದು ಗುರುತಿಸಲಾಗಿದೆ.

ಪ್ರದೀಪ್ ಪೂಜಾರಿ ಸಂಜೆ ಹಾಲಾಡಿ ರಸ್ತೆಯಿಂದ ಕೋಟೇಶ್ವರ ಪೇಟೆಯ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದರು. ಸಂದರ್ಭ ಉಡುಪಿ ಕಡೆಯಿಂದ ಬರುತ್ತಿದ್ದ ಮೆಡಿಟರೇನಿಯನ್ ಶಿಪ್ಪಿಂಗ್ ಕಂಪೆನಿಗೆ ಸೇರಿದ ಬೃಹತ್ ಕಂಟೇನರ್ ಲಾರಿ ಸರ್ವಿಸ್ ರಸ್ತೆಯ ಮೂಲಕ ಅಂಡರ್‌ಪಾಸ್ ಬಳಿ ಯು-ಟರ್ನ್ ಪಡೆಯುವ ಸಂದರ್ಭದಲ್ಲಿ ಪ್ರದೀಪ್ ಪೂಜಾರಿ ಚಲಾಯಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.  ಅಪಘಾತದ ತೀವ್ರೆತೆ ಹೆಲ್ಮೆಟ್ ಧರಿಸಿದ್ದರೂ ಹೆಲ್ಮೆಟ್ ಹೊರಗೆ ಜಾರಿದ್ದು, ತಲೆಗೆ ಬಿದ್ದ ಗಂಭಿರ ಗಾಯಗಳಿಂದಾಗಿ ತೀವ್ರ ರಕ್ತಸ್ರಾವವಾಗಿ ಪ್ರದೀಪ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಪ್ರದೀಪ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು ಕುಂದಾಪುರ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!