ಸಾಸ್ತಾನ: ಸಮುದಾಯದ ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ : ಪಿಡಿಒ ಚಂದ್ರಕಾಂತ್ | ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ,ಪ್ರತಿಭಾ ಪುರಸ್ಕಾರ ಸಮಾರಂಭ
ಕೋಟ: ಸಮುದಾಯದ ಅಭಿವೃದ್ಧಿಗೆ ಒಗ್ಗಟ್ಟು ಬಹುಮುಖ್ಯವಾದ ಪಾತ್ರ ವಹಿಸಲಿದೆ. ಈ ನಿಟ್ಟಿನಲ್ಲಿ ಸಮುದಾಯಗಳು ಸಾಮಾಜಿಕ ಬದ್ಧತೆ ಪ್ರದರ್ಶಿಸುವ ಕಾರ್ಯ ಶ್ಲಾಘನೀಯ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒಲವು ತೋರಬೇಕು ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಕಾಂತ್ ಹೇಳಿದರು. ಅವರು ಸಾಸ್ತಾನದ ಪಾಂಡೇಶ್ವರ ಬಿಲ್ಲವ ಯುವ ವೇದಿಕೆ ಮೂಡಹಡು ಇವರ ಆಶ್ರಯದಲ್ಲಿ ನಡೆದ ನೋಟ್ ಬುಕ್ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಬಿಲ್ಲವ ಸಮಯದಾಯದ 210 ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್‌ಗಳನ್ನು ವಿತರಿಸಲಾಯಿತು. ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ರವಿಕಿರಣ್ ಪೂಜಾರಿ ಅಧ್ಯಕ್ಷತೆವಹಿಸಿದ್ದರು. ಸಾಸ್ತಾನ ಬ್ರಹ್ಮಬೈರ್ದಕಳ ಬಿಲ್ಲವ ಸೇವಾ ಸಂಘ ಗೋಳಿಗರಡಿ ಅಧ್ಯಕ್ಷ ಎಂ.ಸಿ ಚಂದ್ರಶೇಖರ ಪೂಜಾರಿ, ಉದ್ಯಮಿ ದಯಾನಂದ ಪೂಜಾರಿ, ಗೋಪಾಲ್ ಪೂಜಾರಿ ಮಠದತೋಟ, ಮಾಧವ ಪೂಜಾರಿ ಸಾಲಿಗ್ರಾಮ, ಶೇಖರ್ ಪೂಜಾರಿ ಮೂಡ್ಕಟ್ಟು, ಸ್ನೇಹಸಂಜೀವಿ ಒಕ್ಕೂಟ ಪಾಂಡೇಶ್ವರ ಅಧ್ಯಕ್ಷೆ ಸುಜಾತ ವೆಂಕಟೇಶ,ಬಿಲ್ಲವ ಯುವ ವೇದಿಕೆಯ ಕಾರ್ಯದರ್ಶಿ ವಿಜಯ ಪೂಜಾರಿ, ಪತ್ರಕರ್ತ ರವೀಂದ್ರ ಕೋಟ ಮತ್ತಿತರರು ಉಪಸ್ಥಿತರಿದ್ದರು.
ಬಿಲ್ಲವ ಯುವ ವೇದಿಕೆಯ ಕಾರ್ಯಾಧ್ಯಕ್ಷ ಸುರೇಶ್ ಪೂಜಾರಿ ಪಾಂಡೇಶ್ವರ ಸ್ವಾಗತಿಸಿ ಪ್ರಾಸ್ತಾವಿಸಿದರು. ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಇದರ ಸೀಮಾ ವಿಜಯ್ ಪೂಜಾರಿ ಹಾಗೂ ಉಷಾ ಗಣೇಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
