ಕೆ.ಸಿ.ಇ.ಟಿ ಫಲಿತಾಂಶ: ಕುಂದಾಪುರದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ವಿದ್ಯಾರ್ಥಿಗಳಿಂದ ರಾಜ್ಯಮಟ್ಟದಲ್ಲಿ ಶ್ರೇಷ್ಠ ಸಾಧನೆ
ಕುಂದಾಪುರ: ಇತ್ತೀಚೆಗೆ ಪ್ರಕಟಗೊಂಡ ರಾಜ್ಯಮಟ್ಟದ ಕೆ.ಸಿ.ಇ.ಟಿ (KCET) ಪರೀಕ್ಷೆಯಲ್ಲಿ ಕುಂದಾಪುರದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ವಿದ್ಯಾರ್ಥಿಗಳು ಅತ್ಯುತ್ತಮ ರ್ಯಾಂಕ್‌ಗಳನ್ನು ಪಡೆಯುವ ಮೂಲಕ ಕೀರ್ತಿ ತಂದಿದ್ದಾರೆ.

ಏಪ್ರಿಲ್ 23 ಮತ್ತು 24 ರಂದು ನಡೆದ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಜ್ಯಮಟ್ಟದ ಸಿಇಟಿ ಪರೀಕ್ಷೆಯಲ್ಲಿ ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸುಜ್ಞಾನ ನೀಟ್ ಅಕಾಡೆಮಿಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಧನುಷ್ ದೇವಾಡಿಗ(ಎನ್ ಎಲ್ ಟಿ) ರಾಜ್ಯಮಟ್ಟದಲ್ಲಿ 391ನೇ ರ್ಯಾಂಕ್, ಇಂಚರಾ 616, ಸಮ್ಮೆದ ಪಾರೀಸ್ 888, ಪ್ರಿಯಾಂಕ ಶೆಟ್ಟಿ 2680, ಸೃಷ್ಟಿ ಶಿವಾಜಿ 3345, ಸಿಂಚನಾ 4731, ರಜತ್ ಅಡಿಗ 5389, ಕೌಶಿಕ್ ಶೆಟ್ಟಿ 6093, ಜಯರಾಜ್ ಜೆ.ಎಸ್ 6166 ರ್ಯಾಂಕ್ ಗಳಿಸಿದ್ದಾರೆ.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಆಡಳಿತಕ್ಕೆ ಒಳಪಡುವ ಸುಜ್ಞಾನ ಪಿಯು ಕಾಲೇಜು ತನ್ನ ಮೊದಲ ವರ್ಷದಲ್ಲೇ ಹೆಮ್ಮೆಯ ಇತಿಹಾಸ ನಿರ್ಮಿಸಿದೆ. 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಕಾಲೇಜಿನ ಪ್ರಥಮ ಬ್ಯಾಚ್‌ನ 125ವಿದ್ಯಾರ್ಥಿಗಳು ಶೇ. 100ರಷ್ಟು ಅತ್ಯುತ್ತಮ ಫಲಿತಾಂಶ ದಾಖಲಿಸಿ ರಾಜ್ಯಮಟ್ಟದಲ್ಲಿ 2 ರ್ಯಾಂಕ್ ಗಳಿಸಿದ್ದಾರೆ. 91 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ಇದೀಗ ಸಿಇಟಿ ಪರೀಕ್ಷೆಯಲ್ಲೂ ಅಗ್ರ ರ್ಯಾಂಕ್‌ಗಳನ್ನು ಬಾಚಿಕೊಂಡಿದ್ದಾರೆ.
ಇನ್ನು, NEET ಅಕಾಡೆಮಿ ಕುಂದಾಪುರ ಇದರ ಮೂಲಕ ವಿದ್ಯಾರ್ಥಿಗಳಿಗೆ ದೇಶದ ನಾನಾ ಭಾಗದ ಪರಿಣಿತ ತರಬೇತುದಾರರ ಮೂಲಕ ತರಬೇತಿ ನೀಡಿ ಅವರನ್ನು CET, NEET, JEE ಪರೀಕ್ಷೆಗಳಿಗೆ ಸನ್ನದ್ದುಗೊಳಿಸಲಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ. ಕಾಲೇಜಿಗೆ ಕೀರ್ತಿ ತಂದ ಸಾಧಕ ವಿದ್ಯಾರ್ಥಿಗಳನ್ನು ಸುಜ್ಞಾನ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದ ಅಭಿನಂದಿಸಿ, ಶುಭ ಹಾರೈಸಿದ್ದಾರೆ.
