ಗಂಗೊಳ್ಳಿಯ ಬಟ್ಟೆ ಅಂಗಡಿಯಲ್ಲಿ ಕಳ್ಳತನ ಪ್ರಕರಣ : ಮೂವರು ಆರೋಪಿಗಳು ಹಾಗೂ ಇಬ್ಬರು ಅಪ್ರಾಪ್ತರು ಸೇರಿ ಐವರ ಬಂಧನ ಬಂಧನ
ಗಂಗೊಳ್ಳಿ/ಕುಂದಾಪುರ: ಐದು ದಿನಗಳ ಹಿಂದೆ ಅಂದರೆ ಮಾರ್ಚ್ 31 ರಂದು ಗಂಗೊಳ್ಳಿಯ ಜಾಮೀಯಾ ಕಾಂಪ್ಲೆಕ್ಸ್ ನಲ್ಲಿರುವ ಬಟ್ಟೆ ಅಂಗಡಿಯೊಂದರಿಂದ ನಗದು 90,000 ನಗದು ಹಾಗೂ ಮೊಬೈಲ್ ಫೋನ್ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಗಂಗೊಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ಗಂಗೊಳ್ಳಿಯ ಸುಲ್ತಾನ್ ಮೊಹಲ್ಲಾ ನಿವಾಸಿ ನದೀಮ್ (27), ಗಂಗೊಳ್ಳಿಯ ಜಾಮೀಯಾ ಮೊಹಲ್ಲಾ ನಿವಾಸಿ ಮೊಹಮ್ಮದ್ ಆರೀಫ್(18), ಭಟ್ಕಳದ ಚೌಥನಿ ರಸ್ತೆ ಸಮೀಪದ ನಿವಾಸಿ ಮೊಹಮ್ಮದ್ ರಯ್ಯಾನ್ (18) ಬಂಧಿತ ಆರೋಪಿಗಳು. ಅಲ್ಲದೇ ಕಳ್ಳತನ ಕೃತ್ಯದಲ್ಲಿ ಭಾಗಿಯಾದ ಕಾನೂನು ಸಂಘರ್ಷಕ್ಕೊಳಗಾದ ಇಬ್ಬರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರನ್ನು ಬಾಲನ್ಯಾಯ ಮಂಡಳಿ ಎದುರು ಹಾಜರು ಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಪೊಲೀಸರು ಬಂಧಿತರಿಂದ ಮೊಬೈಲ್ ಫೋನ್, 52,000 ರೂ. ಹಣ, 1 ಬೈಕ್ ಹಾಗೂ 1 ಆಟೋರಿಕ್ಷಾ ವಶಕ್ಕೆ ಪಡೆದಿದ್ದಾರೆ.
