ಮಾದಕ ವಸ್ತುಗಳು ಬದುಕು ಬರ್ಬರಗೊಳಿಸುತ್ತವೆ – ಎಎಸೈ ಶಂಕರ್
ಕುಂದಾಪುರ: ಮಾದಕ ವಸ್ತುಗಳನ್ನು ಬಳಸುವುದರಿಂದ ಪ್ರತಿ ವ್ಯಕ್ತಿಯ ಬೌದ್ಧಿಕ, ಮಾನಸಿಕ ಮತ್ತು ಶಾರೀರಿಕ ಜೀವನ ದುರ್ಬಲಗೊಳ್ಳುತ್ತದೆ ಮತ್ತು ಸಮಾಜದಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುವಂತೆ ಮಾಡುತ್ತದೆ. ಆದುದರಿಂದ ಪ್ರತಿಯೊಬ್ಬರೂ ಮಾದಕ ದ್ರವ್ಯ ಸೇವನೆಯಿಂದ ದೂರವಿರಬೇಕು ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಶಂಕರ್ ಹೇಳಿದರು.

ಅವರು ಬುಧವಾರ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಮಾವಿನಕಟ್ಟೆ ಗುಲ್ವಾಡಿ ಗ್ರಾಮದ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಆಕ್ರಮ ಸಾಗಾಟ ವಿರೋಧ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇದೇ ಸಂದರ್ಭ ಶಾಲಾ ಮಕ್ಕಳಿಗೆ ರಸ್ತೆ ಸುರಕ್ಷತೆಯ ಕುರಿತು, ಸಂಚಾರ ನಿಯಮಗಳ ಬಗ್ಗೆ, ಮಕ್ಕಳ ಸಹಾಯವಾಣಿ 1098 ಬಗ್ಗೆ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ, ಸೈಬರ್ ಅಪರಾಧಗಳು ಸಹಾಯವಾಣಿ 1930 ಕುರಿತು, ಪೊಲೀಸ್ ಸಹಾಯವಾಣಿ 112 ಬಗ್ಗೆ, safe touch and un safe touch ಬಗ್ಗೆ ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸಲಾಯಿತು.
