BlogEconomyEducationEntertainmentFashionGovernmentHighlightsHuman storiesLifestyleLocal newsOthersPoliticsState newsSuccess storiesTop StoriesTrendingWomen Care

ಹಾಲಾಡಿ ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ

Aware others:

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಾಲಾಡಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ ಇವರ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಲಾದ ಅಂಗನವಾಡಿ ಕೇಂದ್ರವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, “ಮಕ್ಕಳ ಆರಂಭಿಕ ಹಂತದ ಪೌಷ್ಟಿಕತೆ ಮತ್ತು ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಗ್ರಾಮೀಣ ಭಾಗದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅಂಗನವಾಡಿ ಕೇಂದ್ರಗಳು ಭದ್ರ ಬುನಾದಿಯಾಗಿವೆ. ಈ ಕೇಂದ್ರವು ಮಕ್ಕಳಿಗೆ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ಒದಗಿಸುವಲ್ಲಿ ಮಾದರಿಯಾಗಲಿ” ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಇಲಾಖಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!