BlogElectionEntertainmentFashionHighlightsHuman storiesLifestyleLocal newsPoliticsTop StoriesTrending

ಕೋಟೇಶ್ವರದಲ್ಲಿ ಬಿಜೆಪಿ ಶಕ್ತಿ ಕೇಂದ್ರ ಸಮಿತಿ ರಚನೆ

Aware others:

ಕುಂದಾಪುರ: ಜೂನ್ 27 ಕೋಟೇಶ್ವರದ ಶಾರದ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಸಂಜೆ ಅಂಕದಕಟ್ಟೆ ಮತ್ತು ಕೋಟೇಶ್ವರ ಶಕ್ತಿ ಕೇಂದ್ರ ಸಮಿತಿ ರಚನಾ ಸಭೆ ನಡೆಯಿತು. ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಹಾಗೂ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ನೇತೃತ್ವ ವಹಿಸಿದ್ದರು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ ಬೂತ್ ಮಟ್ಟದಲ್ಲಿ ಪಕ್ಷ ಗಟ್ಟಿಯಾದರೆ ಮಾತ್ರ ಗೆಲುವು ಸಾಧ್ಯ. ಪ್ರತಿ ಮನೆಗೂ ಸರ್ಕಾರದ ಯೋಜನೆ ತಲುಪಿಸುವ ಕೆಲಸ ಕಾರ್ಯಕರ್ತರಿಂದ ಆಗಬೇಕು. ಎಂದರು. ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಮಾತನಾಡಿ
“ಶಕ್ತಿ ಕೇಂದ್ರವೇ ಪಕ್ಷದ ಬೆನ್ನೆಲುಬು. ನೂತನ ತಂಡಗಳು ಪ್ರತಿ ಬೂತ್‌ನಲ್ಲಿ ಸಕ್ರಿಯವಾಗಿ ಕೆಲಸ ಮಾಡಿ ಸಂಘಟನೆ ಬಲಪಡಿಸಬೇಕು ಎಂದರು.

ಸಭೆಯಲ್ಲಿ ನೂತನ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ನೇಮಕ ನಡೆಯಿತು.

ಮಂಡಲ ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ,, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ ಎಸ್, ಜಿಲ್ಲಾ ಉಪಾಧ್ಯಕ್ಷ ಕಾಡುರು ಸುರೇಶ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಕೃಷ್ಣ ಗೊಲ್ಲ, ಸುರೇಶ್ ದೇವಾಡಿಗ, ಪಕ್ಷದ ಹಿರಿಯ ಕಾರ್ಯಕರ್ತರಾದ ಬಡಾಕೇರಿ ಶ್ರೀಪತಿ ಹೆಬ್ಬಾರ್ ಸೇರಿದಂತೆ ಕೋಟೇಶ್ವರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಪ್ರಮುಖರು, ಗ್ರಾಮ ಪಂಚಾಯಿತಿನ ಮಾಜಿ ಸದಸ್ಯರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!