BlogCulturalEconomyEducationEntertainmentFashionHighlightsHuman storiesLifestyleLocal newsOthersSportsTechTop StoriesTrending

ಸಿದ್ದಾಪುರ: ಜ್ಞಾನಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ “ಲೋಗೋ ಇನ್ ರಂಗೋಲಿ” ಸ್ಪರ್ಧೆ

Aware others:

ಸಿದ್ಧಾಪುರ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆ ಹಾಗೂ ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಂಡಾಗ ಯಶಸ್ಸು ಸಾಧಿಸಲು ಸಾಧ್ಯ ಎಂದು ಸುಮುಖ ಎಜ್ಯುಕೇಶನಲ್ ಟ್ರಸ್ಟ್‌ ಅಧ್ಯಕ್ಷ ಬಿ.ಎಸ್ ಸುರೇಶ್ ಶೆಟ್ಟಿ ಹೇಳಿದರು.

ಇಲ್ಲಿನ ಜ್ಞಾನಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಶುಕ್ರವಾರ ನಡೆದ “ಲೋಗೋ ಇನ್ ರಂಗೋಲಿ” ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರುಗಳ ಸಹಕಾರದೊಂದಿಗೆ, ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ರಂಗೋಲಿ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿ ವಿವಿಧ ಕಂಪೆನಿಗಳ ಲೋಗೋಗಳನ್ನು ರಚಿಸಿ  ಗಮನ ಸೆಳೆದರು. ಕಾಲೇಜಿನ ಪ್ರಾಂಶುಪಾಲ ಅಮರೇಶ್ ಕುಮಾರ್ ಹೆಗ್ಡೆ ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!