BlogElectionHighlightsHuman storiesLifestyleLocal newsPoliticsTop StoriesTrending

ಕೋಣಿ: ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ  ಸಂತೋಷ್ ಪೂಜಾರಿ, ಕಾರ್ಯದರ್ಶಿಯಾಗಿ ಗಣೇಶ ಕೆ ಶ್ರೀಯಾನ್ ಆಯ್ಕೆ

Aware others:

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟೇಶ್ವರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಕೋಣಿ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು  ಕೋಣಿಯ ಸಂಜೀವ ಪೂಜಾರಿ ಅವರ ಮನೆಯಲ್ಲಿ ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿಯವರ ಉಪಸ್ಥಿತಿಯಲ್ಲಿ ನೆರವೇರಿತು. ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ  ಸಂತೋಷ್ ಪೂಜಾರಿ, ಕಾರ್ಯದರ್ಶಿಯಾಗಿ ಗಣೇಶ ಕೆ ಶ್ರೀಯಾನ್ ಆಯ್ಕೆಯಾದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮಾತನಾಡಿ, ಕೋಣಿ ಶಕ್ತಿ ಕೇಂದ್ರದಲ್ಲಿ ಸಂಘಟನೆಯನ್ನು ಇನ್ನಷ್ಟು ಚುರುಕುಗೊಳಿಸಬೇಕಿದೆ. ಪ್ರತಿ ಮತಗಟ್ಟೆಗೆ ಒಬ್ಬ ಪ್ರಮುಖರು, ಪ್ರತಿ ಪೇಜ್‌ಗೆ ಒಬ್ಬ ಕಾರ್ಯಕರ್ತರು ಇದೇ ನಮ್ಮಗುರಿ”ಎಂದು ಹೇಳಿದರು. ಇದನ್ನೇ ಆಧಾರವಾಗಿಟ್ಟುಕೊಂಡು ಮುಂಬರುವ ದಿನಗಳಲ್ಲಿ ಬೂತ್ ಮಟ್ಟದ ಕೆಲಸವನ್ನು ಇನ್ನಷ್ಟು ಬಲಪಡಿಸಲಾಗುವುದು ಎಂದರು.

ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ ಎಸ್ ಜಿಲ್ಲಾ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು, ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ರಮೇಶ್ ಪೂಜಾರಿ, ಪ್ರಮುಖರಾದ ರಾಜೇಶ್ ಕಾವೇರಿ, ವಂಡಾರು ಪ್ರವೀಣ್ ಶೆಟ್ಟಿ, ರಾಜೇಶ್ ಶೆಟ್ಟಿ, ಕೃಷ್ಣ ಪೂಜಾರಿ, ಗುಣಕರ ಶೆಟ್ಟಿ, ವಿಜಯ್ ಪೂಜಾರಿ ಹಾಗೂ ಪಕ್ಷದ ಅನೇಕ ಪ್ರಮುಖರು ಮತ್ತು ಕಾರ್ಯಕರ್ತರು ಬೂತ್ ಪ್ರಮುಖರು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!