BlogEconomyEducationEntertainmentFashionHighlightsHuman storiesLifestyleLocal newsOthersTop StoriesTrending

ಸಿದ್ಧಾಪುರ: ಜ್ಙಾನಸರಸ್ವತಿ ಪಿಯು ಕಾಲೇಜಿನಲ್ಲಿ ಸಿ.ಎ ಮತ್ತು ಸಿ.ಎಸ್ ವೃತ್ತಿಪರ ಕೋರ್ಸ್‌ಗಳ ಮಾಹಿತಿ ಕಾರ್ಯಗಾರ

Aware others:

ಸಿದ್ದಾಪುರ: ಇಲ್ಲಿನ ಜ್ಞಾನಸರಸ್ವತಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳ ಮಹತ್ವ ಮತ್ತು ವೃತ್ತಿಜೀವನದ ಅವಕಾಶಗಳ ಬಗ್ಗೆ ಮಾರ್ಗದರ್ಶನ ನೀಡುವ ಸಿ.ಎ ಹಾಗೂ ಸಿ.ಎಸ್  ವೃತ್ತಿಪರ ಕೋರ್ಸ್‌ಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.

ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ವಿ.ರೀಚ್  ಕೋಚಿಂಗ್ ಅಕಾಡಮಿ ಮುಖ್ಯಸ್ಥ ಸಿ.ಎಸ್. ಸಂತೋಷ್ ಪ್ರಭು ಅವರು ವಿದ್ಯಾರ್ಥಿಗಳಿಗೆ ಸಿ.ಎ ಮತ್ತು ಸಿ.ಎಸ್ ಕೋರ್ಸ್‌ಗಳ ಅಗತ್ಯತೆ ಹಾಗೂ ಉದ್ಯೋಗಾವಕಾಶಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಈ ಸಂದರ್ಭ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್. ಸುರೇಶ್ ಶೆಟ್ಟಿ ಮಾತನಾಡಿ, ಕೈಗಾರಿಕೆಗಳು ಮತ್ತು ಉದ್ಯಮ ಕ್ಷೇತ್ರ ಅಭಿವೃದ್ಧಿ ಹೊಂದಬೇಕಾದರೆ ಅದಕ್ಕೆ ಪೂರಕವಾಗಿ ಹಣಕಾಸಿನ ನಿರ್ವಹಣೆ ಮತ್ತು ವಾಣಿಜ್ಯ ಶಿಕ್ಷಣದ ಪ್ರಾಮುಖ್ಯತೆಯನ್ನು ವಿವರಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಪ್ರಾಂಶುಪಾಲ ಅಮರೇಶ್ ಹೆಗ್ಗಡೆ ಪ್ರಾಸ್ತಾವಿಸಿದರು. ಉಪ ಪ್ರಾಂಶುಪಾಲ ಹರ್ಷ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಜಗದೀಶ್ ಕುಲಾಲ್ ಸ್ವಾಗತಿಸಿ ನಿರೂಪಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!