ಕುಂದಾಪುರ: ಪತ್ರಕರ್ತ ನಾಗೇಶ್ ಗಾಣಿಗ ವಿಧಿವಶ
ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಸಿದ್ದಾಪುರ ಭಾಗದ ವಿಜಯ ಕರ್ನಾಟಕ ವರದಿಗಾರ, ನಾಗೇಶ್ ಗಾಣಿಗ ನೇರಳಕಟ್ಟೆ ಇವರು ಹೃದಯಘಾತದಿಂದ ನಿಧನರಾಗಿದ್ದಾರೆ.

ನಾಗೇಶ್ ಗಾಣಿಗ ಅವರು, ಕಳೆದ ಹಲವಾರು ವರ್ಷಗಳಿಂದ ವಿಜಯಕರ್ನಾಟಕ ವರದಿಗಾರರಾಗಿದ್ದರು. ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ತಮ್ಮ ವರದಿಗಾರಿಕೆಯ ಮೂಲಕ ಬೆಳಕು ಚೆಲ್ಲಿದ್ದಲ್ಲದೇ ಹಲವಾರು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದರು.
ಕರ್ತವ್ಯದಲ್ಲಿರುವಾಗ ತೀವ್ರ ಹೃದಯಾಘಾತಕ್ಕೊಳಗಾಗಿದ್ದು, ಅವರನ್ನು ಕುಂದಾಪುರದ ಖಾಸಗೀ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು ಇಹಲೋಕ ತ್ಯಜಿಸಿದ್ದರು ಎಂದು ತಿಳಿದು ಬಂದಿದೆ. ನಾಗೇಶ್ ಗಾಣಿಗರ ನಿಧನದಿಂದ ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟವುಂಟಾಗಿದ್ದು, ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನು ಕುಂದಾಪುರದ ಸರ್ಕಾರೀ ಆಸ್ಪತ್ರೆಯಲ್ಲಿಡಲಾಗಿದೆ. ಅಪಾರ ಬಂಧು ಬಳಗ, ಸ್ನೇಹಿತರನ್ನೂ ಅಗಲಿದ್ದಾರೆ.
