BlogCulturalEconomyEducationEntertainmentFashionHighlightsHuman storiesLifestyleLocal newsNatureTop StoriesTrending

ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪುಟಾಣಿಗಳ ಮಳೆ ಹಬ್ಬ

Aware others:

ಕುಂದಾಪುರ: ಇಂದಿನ ಕೃತಕ ಮತ್ತು ಶರವೇಗದ ಜೀವನ ಶೈಲಿಯಲ್ಲಿ ಪುಟಾಣಿಗಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ಮಳೆಹಬ್ಬ ಮತ್ತು ಹಸಿರು ಬಣ್ಣದ ಸಂಭ್ರಮಾಚರಣೆ ಕಾರ್ಯಕ್ರಮವು ಜುಲೈ 22ರ ಬುಧವಾರ ನಡೆಯಿತು.

ಪ್ರಾಥಮಿಕ ವಿಭಾಗದ ಸಂಯೋಜಕಿ ಪುಷ್ಪಾ ಅಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿ ಮಳೆಯ ಪ್ರಾಮುಖ್ಯತೆ ಹಾಗೂ ಪರಿಸರದ ಕಾಳಜಿಯ ಬಗ್ಗೆ ಪುಟಾಣಿಗಳಿಗೆ ತಿಳಿ ಹೇಳಿದರು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ರೇಶ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜ, ಸಹಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಶಿಕ್ಷಕಿ ಮಮತಾ ಸ್ವಾಗತಿಸಿ, ವಸಂತಿ ರವರು ನಿರೂಪಿಸಿದರ. ರೂಪಾ ವಂದಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!