ಸಿದ್ಧಾಪುರ: ಜ್ಞಾನ ಸರಸ್ವತಿಯಲ್ಲಿ ರಾಷ್ಟ್ರೀಯ ಭದ್ರತಾ ಅಕಾಡೆಮಿ (NDA) ಮಾಹಿತಿ
ಸಿದ್ದಾಪುರ: ಇಲ್ಲಿನ ಜ್ಞಾನಸರಸ್ವತಿ ಪಿಯು ಕಾಲೇಜಿನಲ್ಲಿ ಸುಮುಖ ಎಜುಕೇಷನಲ್ ಟ್ರಸ್ಟ್ ವತಿಯಿಂದ ಎನ್‌ಡಿಎ (National Defence Academy) ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅಶ್ವಿನ್ ವೇಗಾಸ್ ಅವರು ವಿದ್ಯಾರ್ಥಿಗಳಿಗೆ ಎನ್‌ಡಿಎ ಪ್ರವೇಶ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು. ಎನ್‌ಡಿಎಗೆ ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ವಿದ್ಯಾರ್ಹತೆ, ವಯೋಮಿತಿ, ಯುಪಿಎಸ್‌ಸಿ ನಡೆಸುವ ಪ್ರವೇಶ ಪರೀಕ್ಷೆ, ಎಸ್‌ಎಸ್‌ಬಿ (SSB) ಸಂದರ್ಶನ, ವೈದ್ಯಕೀಯ ಪರೀಕ್ಷೆ ಹಾಗೂ ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳಲ್ಲಿ ಸೇವೆ ಸಲ್ಲಿಸುವ ಅವಕಾಶಗಳ ಕುರಿತು ವಿವರವಾಗಿ ತಿಳಿಸಿದರು. ರಾಷ್ಟ್ರಸೇವೆಯ ಮಹತ್ವ, ಶಿಸ್ತು, ದೈಹಿಕ ಸಾಮರ್ಥ್ಯ ಹಾಗೂ ನಿರಂತರ ಅಭ್ಯಾಸದ ಅಗತ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕವಾಗಿ ಮಾರ್ಗದರ್ಶನ ನೀಡಿದರು.


ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಅಮರೇಶ್ ಹೆಗ್ಡೆ, ಉಪ ಪ್ರಾಂಶುಪಾಲರಾದ ಹರ್ಷ ಶೆಟ್ಟಿ ಆಜ್ರಿ ಹಾಗೂ ವಿಜ್ಞಾನ ವಿಭಾಗದ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು, ಜೀವಶಾಸ್ತ್ರ ಉಪನ್ಯಾಸಕಿ ಶ್ರಾವ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
