BlogEntertainmentFashionHighlightsHuman storiesLifestyleLocal newsOthersState newsSuccess storiesTop StoriesTrending

ಕೋಟ ನಾಗೇಂದ್ರ ಪುತ್ರನ್‌ಗೆ ‘ಕರ್ನಾಟಕ ಸೇವಾ ಶ್ರೇಷ್ಠ ರತ್ನ’  ರಾಜ್ಯ ಪ್ರಶಸ್ತಿ

Aware others:

ಬೆಂಗಳೂರು: ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಕೋಟ ನಾಗೇಂದ್ರ ಪುತ್ರನ್ ಅವರಿಗೆ ‘ಕರ್ನಾಟಕ ಸೇವಾ ಶ್ರೇಷ್ಠ ರತ್ನ’ರಾಜ್ಯ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನ ನೆಲಮಂಗಲದ ಪುಷ್ಪ ಬೈರೇಗೌಡ ಕನ್ವೆನ್‌ಷನ್ ಹಾಲ್‌ನಲ್ಲಿ ಶನಿವಾರ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ 4ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಹಾಗೂ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ನಾಗೇಂದ್ರ ಪುತ್ರನ್ ಅವರಿಗೆ  ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಸಾಮಾಜಿಕ ಕ್ಷೇತ್ರದಲ್ಲಿ ಜನಪರ ಕಾಳಜಿಯೊಂದಿಗೆ ವಿವಿಧ ಹೋರಾಟಗಳು ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು, ಅಲ್ಲದೆ ರಾಜಕೀಯ ರಂಗದಲ್ಲಿಯೂ ಸಕ್ರಿಯವಾಗಿ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಹೇಳಿದರು.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ನಾಗೇಂದ್ರ ಪುತ್ರನ್, ರಾಜ್ಯ ಮಟ್ಟದ ಗೌರವ ದೊರೆತಿರುವುದು ಖುಷಿ ಕೊಟ್ಟಿದ್ದು, ಇನ್ನಷ್ಟು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಹುಮ್ಮಸ್ಸು ಬಂದಿದೆ ಎಂದು ಹೇಳಿದ್ದಾರೆ.  ಸಮ್ಮೇಳನದಲ್ಲಿ ರಾಜ್ಯದ ವಿವಿಧೆಡೆಯಿಂದ ಪತ್ರಕರ್ತರು ಹಾಗೂ ಗಣ್ಯರು ಭಾಗವಹಿಸಿದ್ದರು. ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ರಾಜ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.


Aware others:

Leave a Reply

Your email address will not be published. Required fields are marked *

error: Content is protected !!