BlogCulturalEconomyEntertainmentFashionHighlightsHuman storiesLifestyleLocal newsOthersReligionTop StoriesTrending

ಕುಂದಾಪುರ: ವಿಠಲವಾಡಿ ಶ್ರೀ ಚಾಮುಂಡೇಶ್ವರಿ ಸಹಪರಿವಾರ ಸನ್ನಿಧಿಯಲ್ಲಿ ಸಾರ್ವಜನಿಕ ವರಮಹಾಲಕ್ಷ್ಮೀ ಪೂಜೆ

Aware others:

ಕುಂದಾಪುರ: ವಿಠಲವಾಡಿ ಶ್ರೀ ಚಾಮುಂಡೇಶ್ವರಿ ಸಹಪರಿವಾರ ಸನ್ನಿಧಿಯಲ್ಲಿ ಇಂದು ವರಮಹಾಲಕ್ಷ್ಮೀ ಪೂಜೆಯನ್ನು ಭಕ್ತಿಭಾವದಿಂದ ಹಾಗೂ ಶ್ರದ್ಧಾಪೂರ್ವಕವಾಗಿ ನೆರವೇರಿಸಲಾಯಿತು.

ಸಂಜೆ ನಡೆದ ವಿಶೇಷ ಪೂಜೆಯಲ್ಲಿ ಅನೇಕ ಭಕ್ತರು ಹಾಗೂ ಮಹಿಳೆಯರು ಭಾಗವಹಿಸಿ, ಶ್ರೀ ವರಮಹಾಲಕ್ಷ್ಮೀ ದೇವಿಗೆ ಪೂಜೆ ಸಲ್ಲಿಸಿ, ಕುಟುಂಬದ ಸುಖ, ಶಾಂತಿ, ಆರೋಗ್ಯ, ಐಶ್ವರ್ಯ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು. ಪೂಜೆಯ ಅಂಗವಾಗಿ ದೇವಿಗೆ ವಿಶೇಷ ಅಲಂಕಾರ, ಪೂಜೆ ಹಾಗೂ ಮಹಾ ಮಂಗಳಾರತಿ ನೆರವೇರಿಸಲಾಯಿತು.‌ ಭಕ್ತರು ಶ್ರದ್ಧೆಯಿಂದ ಪೂಜೆಯಲ್ಲಿ ಪಾಲ್ಗೊಂಡು ದೇವಿಯ ಆಶೀರ್ವಾದ ಪಡೆದರು.

ಈ ಧಾರ್ಮಿಕ ಕಾರ್ಯಕ್ರಮವು ಭಕ್ತಿಭಾವದ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿದ್ದು, ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲಾ ಭಕ್ತರು, ಸೇವಾಕರ್ತರು ಹಾಗೂ ಸಮಿತಿ ಸದಸ್ಯರಿಗೆ ದೇವಸ್ಥಾನ ಸಮಿತಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು.


Aware others:

Leave a Reply

Your email address will not be published. Required fields are marked *

error: Content is protected !!