ಟೇಬಲ್ ಟೆನ್ನಿಸ್ ಸ್ಪರ್ಧೆ – ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿನಿ ಮಯೋಲಾ ರಾಜ್ಯಮಟ್ಟಕ್ಕೆ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಶಾರದಾ ಪದವಿಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2026-2027ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಹುಡುಗಿಯರ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸುಜ್ಞಾನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ, ಮೌರಿಸ್ ಕಾರ್ವಲ್ಲೋ ಹಾಗೂ ಮಾಯಾ ಎಂ ಕಾರ್ವಲ್ಲೋ ದಂಪತಿಯ ಪುತ್ರಿ ಮಯೋಲಾ ಕಾರ್ವಲ್ಲೋ ಶ್ರೇಷ್ಠ ಸಾಧನೆಯ ಮೂಲಕ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೇ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಶ್ರಾವ್ಯ ಶೆಟ್ಟಿ ಮತ್ತು ಅನುಷ್ಕಾ .ಎನ್ ದ್ವಿತೀಯ ಪ್ರಶಸ್ತಿ ಪಡೆದುಕೊಂಡಿದ್ದಾರೆ.


ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸತೀಶ್ ಕುಮಾರ್ ಮತ್ತು ಲಲಿತಾ ಮಾರ್ಗದರ್ಶನ ನೀಡಿದ್ದು, ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಕಾಲೇಜಿನ ಪ್ರಾಂಶುಪಾಲ ರಂಜನ್ ಶೆಟ್ಟಿ ವಿಜೇತ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ.
