BlogEconomyEntertainmentFashionHealthHighlightsHuman storiesLifestyleLocal newsOthersTop StoriesTrending

ಕಂಡ್ಲೂರು: ಆಗಸ್ಟ್ 30ರಂದು ಕಾವ್ರಾಡಿಯಲ್ಲಿ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Aware others:

ಕುಂದಾಪುರ: ಉಡುಪಿಯ ಆದರ್ಶ ಆಸ್ಪತ್ರೆ, ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ – ಜಿಲ್ಲೆ 317ಸಿ ಹಾಗೂ ಝಿಯಾ ಎಜುಕೇಷನಲ್ ಟ್ರಸ್ಟ್ ಕಂಡ್ಲೂರು ಇವರ ಸಹಯೋಗದಲ್ಲಿ ಕುಂದಾಪುರ ತಾಲೂಕಿನ ಕಾವ್ರಾಡಿ ಗ್ರಾಮದ ಕಂಡ್ಲೂರಿನ ಝಿಯಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಗಸ್ಟ್ 30ರ ಭಾನುವಾರ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ಉಚಿತ ಶಿಬಿರದಲ್ಲಿ 15ಕ್ಕೂ ಅಧಿಕ ತಜ್ಞ ವೈದ್ಯರು ಭಾಗವಹಿಸಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ವೈದ್ಯಕೀಯ ಸಲಹೆ ನೀಡಲಿದ್ದಾರೆ. ಹೃದಯ ತಪಾಸಣೆ, ECG, ರಕ್ತದಲ್ಲಿನ ಸಕ್ಕರೆ, ಕೊಲೆಸ್ಟ್ರಾಲ್, ಕಣ್ಣಿನ ತಪಾಸಣೆ ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ವೈದ್ಯರ ಸಲಹೆಯ ಮೇರೆಗೆ ಅಗತ್ಯವಿರುವವರಿಗೆ ಉಚಿತ ಔಷಧ ವಿತರಿಸಲಾಗುತ್ತದೆ. ಕಂಡ್ಲೂರು–ಕಾವ್ರಾಡಿ ಗ್ರಾಮದ ನಿವಾಸಿಗಳಷ್ಟೇ ಅಲ್ಲದೆ, ಕುಂದಾಪುರ ತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕರೂ ಈ ಶಿಬಿರದಲ್ಲಿ ಭಾಗವಹಿಸಿ ಉಚಿತ ಆರೋಗ್ಯ ಸೇವೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.


Aware others:

Leave a Reply

Your email address will not be published. Required fields are marked *

error: Content is protected !!