ಕೋಟದ ವಿವೇಕ ಪದವಿ ಪೂರ್ವ ಕಾಲೇಜಿನ ಕಬಡ್ಡಿ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ


ಕೋಟ: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸುಜ್ಞಾನ ನ್ಯಾಷನಲ್ ಪಿ.ಯು ಕಾಲೇಜು ಬಾರ್ಕೂರು ಇವರ ಆಶ್ರಯದಲ್ಲಿನಡೆದ ತಾಲ್ಲೂಕು ಮಟ್ಟದ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಕೋಟದ ವಿವೇಕ ಪದವಿ ಪೂರ್ವ ಕಾಲೇಜಿನ ಬಾಲಕ ಹಾಗು ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ವಿದ್ಯಾಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಅಭಿನಂದಿಸಿದೆ.
