BlogCulturalEducationEntertainmentFashionHighlightsHuman storiesLifestyleLocal newsSportsState newsSuccess storiesTop StoriesTrending

ಹೊಸಂಗಡಿ: ಖೋಖೋ ದಲ್ಲಿ ಸಿದ್ಧಾಪುರದ ಸರಸ್ವತಿ ವಿದ್ಯಾಲಯ ತಾಲೂಕು ಮಟ್ಟಕ್ಕೆ ಆಯ್ಕೆ

Aware others:

ಕುಂದಾಪುರ: ಶುಕ್ರವಾರ ಹೊಸಂಗಡಿಯಲ್ಲಿ ನಡೆದ ಅಂಪಾರು ಕ್ಲಸ್ಟರ್ ಮಟ್ಟದ ಖೋ-ಖೋ ಪಂದ್ಯಾವಳಿಯ ಅಂಡರ್-14 ಬಾಲಕರ ವಿಭಾಗದಲ್ಲಿ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.

ಅಂಡರ್-14 ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡರೆ, ಅಂಡರ್-17 ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯಶಿಕ್ಷಕಿ ಶ್ವೇತಾ ಗಣೇಶ್ ಅವರು ಅಭಿನಂದನೆ ಸಲ್ಲಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರತ್ನಾಕರ ಶೆಟ್ಟಿ, ಅಶ್ವಿನಿ ಶೆಟ್ಟಿ ಹಾಗೂ ಸದಾಶಿವ ಜೆ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ಪಂದ್ಯಾವಳಿಗೆ ಉತ್ತಮ ತರಬೇತಿ ನೀಡಿದ್ದಾರೆ.

ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ, ತಾಲ್ಲೂಕು ಮಟ್ಟದ ಪಂದ್ಯಾವಳಿಗೆ ಆಯ್ಕೆಯಾದ ಅಂಡರ್-14 ಬಾಲಕರ ತಂಡಕ್ಕೆ ಶುಭ ಹಾರೈಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!