*ಸಿದ್ಧಾಪುರ: ಶಿಕ್ಷಕರು ಹಾಕಿಕೊಟ್ಟ ದಾರಿಯಲ್ಲಿ ಗುರಿ ಮುಟ್ಟುವುದೇ ನಿಜವಾದ ಗುರುದಕ್ಷಿಣೆ – ನಿವೃತ್ತ ಶಿಕ್ಷಕ ಐ. ನಾರಾಯಣ | ಜ್ಞಾನ ಸರಸ್ವತಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ದಿನಾಚರಣೆ*

ಕುಂದಾಪುರ: ಯಾವ ಶಿಕ್ಷಕನಿಗೂ ವಿದ್ಯಾರ್ಥಿಗಳ ಮೇಲೆ ವೈಯುಕ್ತಿಕ ದ್ವೇಷವಿರುವುದಿಲ್ಲ. ವಿದ್ಯಾರ್ಥಿಯೊಬ್ಬ ಕಲಿತು ಉನ್ನತ ಹುದ್ದೆಗೇರಿದರೆ ಅತ್ಯಂತ ಹೆಚ್ಚು ಖುಷಿಪಡುವುದು ಶಿಕ್ಷಕಕನೇ. ಗುರುಗಳು ಹಾಕಿಕೊಟ್ಟ ದಾರಿಯಲ್ಲಿ ಗುರಿಮಟ್ಟುವುದೇ ನಿಜವಾದ ಗುರುದಕ್ಷಿಣೆ ಎಂದು ನಿವೃತ್ತ ಮುಖ್ಯೋಪಾದ್ಯಾಯ ಐ. ನಾರಾಯಣ್ ಹೇಳಿದರು. ಸಿದ್ಧಾಪುರದ ಜ್ಞಾನಸರಸ್ವತಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಶಿಕ್ಷಕರ ದಿನಾಚರಣೆಯ ಸಂದರ್ಭ ಗುರುವಂದನೆ ಸ್ವೀಕರಿಸಿ ಮಾತನಾಡಿದರು.





ಇನ್ನೋರ್ವ ನಿವೃತ್ತ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಮಾತನಾಡಿ, ಶಿಕ್ಷಕರ ಬಗ್ಗೆ ಗೌರವ ಮತ್ತು ಭಯ -ಭಕ್ತಿ ಇದ್ದಾಗ ಉತ್ತಮ ವ್ಯಕ್ತಿಗಳಾಗಲು ಸಾಧ್ಯ ಎಂದರು. ನಿವೃತ್ತ ಮುಖ್ಯೋಪಾದ್ಯಾಯಿನಿ ಶಾರದಾ ಮಾತನಾಡಿ, ಶಿಕ್ಷಕರು ಮಕ್ಕಳನ್ನು ಪ್ರೀತಿಯಿಂದ ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರೇಪಿಸಬೇಕು ಎಂದರು.








ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಎಸ್ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಇದೇ ಸಂದರ್ಭ ಮೂವರು ನಿವೃತ್ತ ಶಿಕ್ಷಕರಿಗೆ ಗುರುವಂದನೆ ಸಲ್ಲಿಸಲಾಯಿತು. ಸುಮುಖ ಎಜ್ಯುಕೇಷನಲ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.









ಜ್ಞಾನ ಸರಸ್ವತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೆಗ್ಡೆ ಪ್ರಾಸ್ತಾವಿಸಿ, ಸ್ವಾಗತಿಸಿದರು. ಉಪ ಪ್ರಾಂಶುಪಾಲ ಹರ್ಷ ಶೆಟ್ಟಿ ಆಜ್ರಿ ವಂದಿಸಿದರು. ಭಾಷಾ ಉಪನ್ಯಾಸಕರಾದ ನಾಗರಾಜ್ ಹಾಗೂ ಮಂಜುನಾಥ್ ನಿರೂಪಿಸಿದರು. ಸಂಸ್ಥೆಯ ಕಾರ್ಯದರ್ಶಿ ಯು. ಪಾಂಡುರಂಗ ಪಡಿಯಾರ್, ಸರಸ್ವತಿ ವಿದ್ಯಾಲಯದ ಮುಖ್ಯೋಪಾದ್ಯಾಯಿನಿ ಶ್ವೇತಾ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಶಿಕ್ಷಕರಿಗಾಗಿ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆದವು.







