BlogCulturalEconomyEducationEntertainmentFashionHighlightsHuman storiesLifestyleLocal newsOthersSuccess storiesTop StoriesTrending

ಬ್ರಹ್ಮಾವರ ತಾಲ್ಲೂಕು ಐದನೇ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ನರೇಂದ್ರ ಕುಮಾರ್ ಕೋಟ ಆಯ್ಕೆ

Aware others:

ಕುಂದಾಪುರ: ಬ್ರಹ್ಮಾವರ ತಾಲ್ಲೂಕು ಐದನೇ ಸಾಹಿತ್ಯ ಸಮ್ಮೇಳನವು ಅಕ್ಟೊಬರ್ 4ರಂದು ಸಾಸ್ತಾನದ ಶಿವಕೃಪ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಶಿವಕೃಪಾ ಕಲ್ಯಾಣಮಂಟಪದಲ್ಲಿ ಭಾನುವಾರ ನಡೆಯಿತು.

ಕಸಾಪ ತಾಲ್ಲೂಕು  ಅಧ್ಯಕ್ಷ ರಾಮಚಂದ್ರ ಐತಾಳ್ ಮಾತನಾಡಿ ಸಮ್ಮೇಳನದ ರೂಪುರೇಷೆ ಕುರಿತು ಮಾತನಾಡಿದರು.ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ನರೇಂದ್ರ ಕುಮಾರ್ ಕೋಟ ರವರ ಹೆಸರನ್ನು ಅಧ್ಯಕ್ಷ ರಾಮಚಂದ್ರ ಐತಾಳ್ ಘೋಷಿಸಿದರು. ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸತೀಶ್ ವಡ್ಡರ್ಸೆ ಕಾರ್ಯಕ್ರಮದ ಯಶಸ್ಸಿಗೆ ಸರ್ವರ ಸಹಕಾರ ಅಗತ್ಯ ಎಂದರು. ಸಭೆಯಲ್ಲಿ ಸಮ್ಮೇಳನದ ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಲಾಯಿತು.

ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಹಿರಿಯ ಸಾಹಿತಿ ಉಪೇಂದ್ರ ಸೋಮಯಾಜಿ, ಪ್ರತಾಪ ಶೆಟ್ಟಿ, ರಘು ಮಧ್ಯಸ್ಥ, ತಾಲ್ಲೂಕು ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೋಶಾಧಿಕಾರಿ ಅಲ್ತಾರು ನಾಗರಾಜ್ ನಿರೂಪಿಸಿ ವಂದಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!