CulturalBlogElectionHighlightsHuman storiesLifestyleLocal newsOthersPoliticsTop StoriesTrending

ಸಾಲಿಗ್ರಾಮದಲ್ಲಿ ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ವಿಶೇಷ ಪೂಜೆ : ಶಾಸಕ ಕಿರಣ್ ಕೊಡ್ಗಿ ಭಾಗಿ

Aware others:

ಸಾಲಿಗ್ರಾಮ, ಸೆ.17: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ವಿಶೇಷ ಪೂಜೆ ಹಾಗೂ ಪ್ರಾರ್ಥನಾ ಕಾರ್ಯಕ್ರಮ ನೆರವೇರಿತು. ಕುಂದಾಪುರ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಮತ್ತು ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರ ದೀರ್ಘಾಯುಷ್ಯ, ಆಯುರಾರೋಗ್ಯಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಮೋದಿ ಅವರ 25 ವರ್ಷಗಳ ರಾಜಕೀಯ ಪಯಣ ತ್ಯಾಗ, ಸೇವೆ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಿತವಾಗಿದೆ. ಸಾಮಾನ್ಯ ಕಾರ್ಯಕರ್ತನಾಗಿ ರಾಜಕೀಯ ಜೀವನ ಆರಂಭಿಸಿ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ನಾಯಕರಾಗಿ ಬೆಳೆದ ಅವರ ಬದುಕು ನಮಗೆಲ್ಲರಿಗೂ ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಸುಧೀರ್ ಕೆ.ಎಸ್, ಜಿಲ್ಲಾ ಉಪಾಧ್ಯಕ್ಷೆ ಜ್ಯೋತಿ ಉದಯ ಪೂಜಾರಿ, ಜಿಲ್ಲಾ ಎಸ್.ಸಿ ಮೋರ್ಚಾ ಉಪಾಧ್ಯಕ್ಷ ಮಾಧವ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಸಾಲಿಗ್ರಾಮ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಯೇಂದ್ರ ಪೂಜಾರಿ, ಪ್ರಧಾನ ಕಾರ್ಯದರ್ಶಿ ದೇವೇಂದ್ರ ದೇವಾಡಿಗ, ಪಟ್ಟಣ ಪಂಚಾಯತ್ ಮಾಜಿ ಸದಸ್ಯರಾದ ರಾಜು ಪೂಜಾರಿ, ಅನುಸೂಯ ಹೇರಳೆ, ಸುಲತಾ ಹೆಗ್ಡೆ, ಶ್ಯಾಮ್ ಸುಂದರ್ ನಾಯರಿ, ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಶೋಕ್ ಪೂಜಾರಿ, ಕಾರ್ಕಡ ಚಿತ್ರಪಾಡಿ ಶಕ್ತಿಕೇಂದ್ರದ ಅಧ್ಯಕ್ಷ ಭಾಸ್ಕರ್ ಪೂಜಾರಿ, ಗುಂಡ್ಮಿ ಶಕ್ತಿಕೇಂದ್ರದ ಅಧ್ಯಕ್ಷ ದೇವೇಂದ್ರ ಪೂಜಾರಿ, ಪ್ರಮುಖರಾದ ಅರುಣ್ ಹೊಳ್ಳ, ರಾಘವೇಂದ್ರ ಹೊಳ್ಳ, ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!