BlogCrime newsGovernmentHighlightsHuman storiesLifestyleLocal newsNational NewsObituaryOthersState newsTop StoriesTrendingWorld

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಕಾರಿನ ಡಿಕ್ಕಿಯಲ್ಲಿ 9 ಪೀಸ್‌ ಮಾಡಿ ತುಂಬಿದ್ದ ದುಷ್ಕರ್ಮಿಗಳು

Aware others:

ಕುಂದಾಪುರ: ದುಬೈನ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕಾಶ್ ಕುಂದರ್ ಕೊಲೆಯಾದ ದುರ್ದೈವಿ.

ಕಳೆದ ಜುಲೈ ತಿಂಗಳಲ್ಲಿ ಈ ಕೊಲೆ ನಡೆದಿದ್ದು, ಎರಡು ತಿಂಗಳ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ಅವರನ್ನು ದುಷ್ಕರ್ಮಿಗಳು ಕೊಲೆಮಾಡಿ, ಶವವನ್ನು 9 ತುಂಡುಗಳನ್ನಾಗಿ ಮಾಡಿ, ಅವರದ್ದೇ ಕಾರಿನ ಡಿಕ್ಕಿಯಲ್ಲಿ ತುಂಬಿದ್ದರು ಎಂದು ತಿಳಿದುಬಂದಿದೆ. ಈ ಕೊಲೆಯಿಂದ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ.

ಶಾರ್ಜಾದಲ್ಲಿ ಪತ್ನಿ ಹಾಗೂ ಪುತ್ರನೊಂದಿಗೆ ಪ್ರಕಾಶ್‌ ವಾಸವಾಗಿದ್ದರು. ಕೊಲೆಯ ಬಳಿಕ ಮೃತನ ಪತ್ನಿ ಟೀನಾ ಹಾಗೂ ಅಪ್ರಾಪ್ತ ವಯಸ್ಸಿನ ಪುತ್ರ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪತ್ನಿಯೇ ಕೊಲೆ ಮಾಡಿಸಿದ್ದಾರೆಯೇ? ಅಥವಾ ಬೇರೆಯವರ ಸಹಾಯದಿಂದ ಕೃತ್ಯ ಎಸಗಲಾಗಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಪತ್ನಿ ಮತ್ತು ಪುತ್ರ ಭಾರತಕ್ಕೆ ಬಂದಿರುವ ಶಂಕೆ ಕೂಡ ವ್ಯಕ್ತವಾಗಿದೆ. ಈ ಸಂಬಂಧ ಶಾರ್ಜಾ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಜು.20 ರಂದು ಸಹೋದರನನ್ನು ಸಂಪರ್ಕಿಸಲು ಪ್ರಶಾಂತ್ ಕುಂದರ್ ಯತ್ನಿಸಿದ್ದರು. ಯಾವಾಗಲೂ ಪ್ರಕಾಶ್ ವಾಯ್ಸ್ ಮೆಸೇಜ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದರು. ಈ ಬಾರಿ ಟೆಕ್ಸ್ಟ್ ಮೆಸೇಜ್ ಮೂಲಕ ಉತ್ತರ ನೀಡುತ್ತಿದ್ದರು. ಕುಟುಂಬಸ್ಥರು ಕರೆ ಮಾಡುವಂತೆ ಒತ್ತಾಯಿಸಿದ ನಂತರ ಸಂಪರ್ಕ ಕಡಿತಗೊಂಡಿತ್ತು.

ಇದರಿಂದ ಆತಂಕಗೊಂಡ ಸಂಬಂಧಿಕರು ಪ್ರಕಾಶ್ ಕೆಲಸ ಮಾಡುತ್ತಿದ್ದ ಕಂಪನಿಯನ್ನು ಸಂಪರ್ಕಿಸಿದ್ದರು. ಆಗ ಅವರು ಭಾರತಕ್ಕೆ ಹೋಗಿರುವುದಾಗಿ ಕಂಪನಿ ತಿಳಿಸಿತ್ತು. ಆದರೆ ಭಾರತಕ್ಕೆ ಬಾರದೇ ಇರುವುದರಿಂದ ಶಾರ್ಜಾದಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರು ಹುಡುಕಾಟ ನಡೆಸಿದಾಗ ಕಾರಿನ ಡಿಕ್ಕಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಇದೀಗ ಮೃತದೇಹಕ್ಕಾಗಿ ಕುಟುಂಬಸ್ಥರು ಕಾಯುತ್ತಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!