BlogCulturalEconomyEducationEntertainmentFashionHighlightsHuman storiesLifestyleLocal newsOthersSuccess storiesTop StoriesTrending

ದೈಹಿಕ‌ ಶಿಕ್ಷಣ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿಗೆ ಕಾರಂತ ಶಿಕ್ಷಕ ಪ್ರಶಸ್ತಿ

Aware others:

ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಉಡುಪಿಯ ಹಾಜಿ ಅಬ್ದುಲ್ಲ ಸಾಹೇಬ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್, ಸಂದೀಪ್ ಶೆಟ್ಟಿ ಸಾರಥ್ಯದ ಏಸ್ ಕ್ರೀಟ್ ಅಡೆಷನ್ಸ್ ಹಾಗೂ ‘ಉಸಿರು ಕೋಟ’ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ 2026ನೇ ಸಾಲಿನ ಪ್ರತಿಷ್ಠಿತ ಕಾರಂತ ಶಿಕ್ಷಕ ಪುರಸ್ಕಾರವು ಹೈಕಾಡಿ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿಗೆ ಲಭಿಸಿದೆ.

ಉಡುಪಿ ಜಿಲ್ಲೆಯ ವಿವಿಧ ಶಾಲೆ ಹಾಗೂ ಪ್ರೌಢ ಶಾಲೆಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಹಾಗೂ  ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಸಾಧಕ ಶಿಕ್ಷಕರಿಗೆ ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. 

ಸೆಪ್ಟಂವರ್ 26ರ ಶನಿವಾರ ಅಪರಾಹ್ನ 4.00 ಗಂಟೆಗೆ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನೀಡಿ ಗೌರವಿಸಲಾಯಿತು. ಪ್ರತಿಷ್ಠಾನದ ಗೌರವಾಧ್ಯಕ್ಷ ಆನಂದ ಸಿ. ಕುಂದ‌ರ್, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಪಿಡಿಓ ರವೀಂದ್ರ ರಾವ್ ಹಾಗೂ ಕಾರ್ಯದರ್ಶಿ ಸುಮತಿ ಅಂಚನ್ ಹಾಗೂ ಗಣ್ಯರ ಸಮ್ಮುಖದಲ್ಲಿ ಇಒ ಪ್ರಶಸ್ತಿ ನೀಡಿ ಗೌರವಿಸಲಾಯಿತು.


Aware others:

Leave a Reply

Your email address will not be published. Required fields are marked *

error: Content is protected !!