BlogEconomyEducationEntertainmentFashionGovernmentHighlightsHuman storiesLifestyleLocal newsTop StoriesTrending

ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 157 ನೇ ಗಾಂಧೀಜಿ, ಶಾಸ್ತ್ರೀಯವರ ಜನ್ಮ ದಿನಾಚರಣೆ

Aware others:

ಕುಂದಾಪುರ: ಶ್ರೀ ವೆಂಕಟರಮಣ  ಸಮೂಹ ಶಿಕ್ಷಣ ಸಂಸ್ಥೆಗಳು, ಕುಂದಾಪುರ ಇಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಯವರ 157 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಭಾರತ್ ಸ್ಕೌಟ್ಸ್ & ಗೈಡ್ಸ್ ಸ್ಥಳೀಯ ಸಂಸ್ಥೆ, ಕುಂದಾಪುರ ಇದರ ಅಧ್ಯಕ್ಷೆ ಗುಣರತ್ನರವರು ದೀಪ ಬೆಳಗಿಸಿ ಉದ್ಘಾಟಿಸಿ, ಈ ದಿನದ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳಾದ ಪ್ರೇಕ್ಷಾ ಪೈ 8F ಹಾಗೂ ವೈಷ್ಣವಿ ಪಿ. ಶೆಟ್ಟಿ  9E ಇವರು  ಗಾಂಧೀಜಿ ಮತ್ತು ಶಾಸ್ತ್ರೀಜಿ ಜಯಂತಿಯ ಕುರಿತು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂದೀಪ್ ಗಾಣಿಗ, ಉಪಪ್ರಾಂಶುಪಾಲ ಸುಜಯ್ ಕೋಟೆಗಾರ್, ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಹಾಗೂ ಸ್ಕೌಟ್ಸ್ ಶಿಕ್ಷಕ ಸುಬ್ರಮಣ್ಯ ರವರು ಗಾಂಧೀಜಿ ಹಾಗೂ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿದರು. ಸ್ಕೌಟ್ಸ್ ಶಿಕ್ಷಕ ವಸಂತ ಕುಮಾರ್ ಸ್ವಾಗತಿಸಿ , ಬುಲ್ ಬುಲ್ ಶಿಕ್ಷಕಿ ಪದ್ಮಾವತಿ ವಂದಿಸಿದರು. ಗೈಡ್ಸ್ ಶಿಕ್ಷಕಿ ರಮಣಿ ಕಾರ್ಯಕ್ರಮವನ್ನು ನಿರೂಪಿಸಿದರು. ಸ್ಕೌಟ್ಸ್, ಗೈಡ್ಸ್ ,ಎನ್.ಸಿ.ಸಿ , ಶಾಲಾ ಮಕ್ಕಳು ಹಾಗೂ ಸಂಸ್ಥೆಯ ಬೋಧಕ –ಬೋಧಕೇತರ ಸಿಬ್ಬಂದಿಯವರು  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಸರ್ವಧರ್ಮ ಪ್ರಾರ್ಥನೆ ಹಾಗೂ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.


Aware others:

Leave a Reply

Your email address will not be published. Required fields are marked *

error: Content is protected !!