BlogEducationHealthHighlightsHuman storiesLifestyleLocal newsOthersTop StoriesTrendingWomen Care

ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರೋಗ್ಯ ಮತ್ತು ನೈರ್ಮಲ್ಯ – ವಿದ್ಯಾರ್ಥಿನಿಯರಿಗೆ ಮಾಹಿತಿ ಕಾರ್ಯಗಾರ

Aware others:

ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಿಗೆ ಆರೋಗ್ಯ ಮತ್ತು ನೈರ್ಮಲ್ಯ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಕುಂದಾಪುರ ರೂರಲ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಸಹಾಯಕಿ ಪ್ರಾಧ್ಯಾಪಕಿ ಸುಜಲಾ ನಂದಿನಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ವಿದ್ಯಾರ್ಥಿನಿಯರಿಗೆ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ವಿವರವಾಗಿ ತಿಳಿಸಿದರು.

ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿನಿಯರು ತಮ್ಮಲ್ಲಿರುವ ಸಂದೇಹಗಳನ್ನು ಪ್ರಶ್ನೆ ಕೇಳುವ ಮೂಲಕ ಬಗೆಹರಿಸಿಕೊಂಡರು. ಸಹ ಶಿಕ್ಷಕಿ ರಮಣಿಯವರು ಪ್ರಾರ್ಥಿಸಿ, ಸಹಶಿಕ್ಷಕಿ ಪೂರ್ಣಿಮಾ ಶೇಟ್ ರವರು ನಿರೂಪಿಸಿ, ಸಹಶಿಕ್ಷಕ ಸಾಗರ್ ರವರು ವಂದನಾರ್ಪಣೆಗೈದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂದೀಪ್ ಗಾಣಿಗ, ಉಪಪ್ರಾಂಶುಪಾಲ ಸುಜಯ್ ಕೋಟೆಗಾರ್, ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ  ಪ್ರಮೀಳಾ ಡಿಸೋಜರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!