ಮೋದಿ ಹವಾ ನಾಪತ್ತೆಯಾಗಿ ಜನ ಬಯಸಿದ ಬದಲಾವಣೆ ಸಮೀಪಿಸಿದೆ : ಮೋಟಮ್ಮ
ಚಿಕ್ಕಮಗಳೂರು/ಮೂಡಿಗೆರೆ: ಸುಳ್ಳಿನ ಸರಕುಗಳ ಅರಮನೆಯಲ್ಲಿ ಅಧಿಕಾರ ನಡೆಸುತ್ತಿರವ ಮೋದಿಯ ನಿಜ ಬಣ್ಣ ಜನರಿಗೆ ಮನದಟ್ಟಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಜನ ಬದಲಾವಣೆ ಬಯಸಿದ್ದಾರೆ ಎಂದು ಮಾಜೀ ಸಚಿವೆ ಮೋಟಮ್ಮ ಹೇಳಿದ್ದಾರೆ.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ತಯಿ ಕೆ. ಜಯಪ್ರಕಾಶ್ ಹೆಗ್ಡೆಯವರ ಪರ ಮೂಡಿಗೆರೆಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಇಷ್ಟು ದಿನ ಮೋದಿಯ ಮೋಡಿಗೆ ಮರುಳಾಗಿದ್ದ ಜನ ಎಚ್ಚರಾಗಿದ್ದಾರೆ. ಪ್ರಶ್ನೆ ಮಾಡುತ್ತಿದ್ದಾರೆ. ಕಾರ್ಪೋರೇಟ್ ಕುಳಗಳ ರಕ್ಷಣೆಗೆನಿಂತಿರುವ ಬಿಜೆಪಿಗೆ ಬಡ ಜನಸಾಮಾನ್ಯನ ಸಮಸ್ಯೆಗಳು ಅರ್ಥವಾಗುತ್ತಿಲ್ಲ. ಹಾಗಾಗಿಯೇ ಕಾಂಗ್ರೆಸ್ ನೀಡಿದ ಗ್ಯಾರಂಟಿ ಭರವಸೆಗಳನ್ನು ಅಪಹಾಸ್ಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಯಾವತ್ತೂ ಜನಸಾಮಾನ್ಯರ ಪರ ಎನ್ನುವುದನ್ನು ಕಾಂಗ್ರೆಸ್ ಮತ್ತೆ ಮತ್ತೆ ಸಾಬೀತು ಮಾಡಿದೆ. ಜನ ಎಲ್ಲವನ್ನೂ ನೋಡುತ್ತಾರೆ. ಬಿಜೆಪಿಗೆ ಪಾಠ ಕಲಿಸುತ್ತಾರೆ ಎಂದರು.

ಗ್ಯಾರೆಂಟಿ ಯೋಜನೆಗಳಿಂದ ರಾಜ್ಯದ ಮಾತೆಯರು ಹಾದಿ ತಪ್ಪುತ್ತಿದ್ದಾರೆ ಎಂದು ಹೇಳಿದನಕುಮಾರ ಸ್ವಾಮಿ ಮಾತಿಗೆ ಆಕ್ರೋಶಿತರಾದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ,
ಇದು ಅತ್ಯಂತ ನಾಚಿಕೆಗೇಡಿನ ಸಂಗತಿ, ಇದು ರಾಜ್ಯದ ಮಹಿಳೆಯರಿಗೆ ಮಾಡಿದ ಅವಮಾನ, ಕುಮಾರಸ್ವಾಮಿಯವರ ಹೇಳಿಕೆಗೆ ಎಪ್ರಿಲ್ 26ರಂದು ಮಹಿಳೆಯರೆ ಉತ್ತರ ನೀಡುತ್ತಾರೆ ಎಂದರು.
ಈ ಹಿಂದೆ ಜಯಪ್ರಕಾಶ ಹೆಗ್ಡೆ ಅವರಿಗೆ ಕಾರ್ಯನಿರ್ವಹಿಸಲು ಸಿಕ್ಕಿದ್ದು ಕೇವಲ 20 ತಿಂಗಳ ಕಾಲಾವಕಾಶ. ಹಾಗಾಗಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಬೇಕಾಗಿದೆ. ರಾಜ್ಯದ ಯೋಜನೆಗಳನ್ನು ತರಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುವೆ. ಅದೇ ರೀತಿ ಕೇಂದ್ರದಿಂದ ಯೋಜನೆಗಳನ್ನು ತರಲು ನಮಗೆ ಒಬ್ಬ ಸಮರ್ಥ ನಾಯಕರ ಅಗತ್ಯವಿದೆ. ಆ ಕಾರ್ಯಕ್ಕ ಜಯಪ್ರಕಾಶ ಹೆಗ್ಡೆ ಅವರು ಸಮರ್ಥರಾಗಿದ್ದಾರೆ ಎಂದರು.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವ ಜನಪ್ರಿಯತೆ ಕಳೆಗುಂದುತ್ತಿದೆ. ಯುವ ಕಾರ್ಯಕರ್ತರು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಅಂಬಾನಿ ಮತ್ತು ಅದಾನಿಯನ್ನು ಶ್ರೀಮಂತರನ್ನಾಗಿ ಮಾಡಿದ ಮೋದಿ, ರಾಮ ಮಂತ್ರ ಜಪಿಸಲು ಹೇಳಿದರು. ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಯುವ ಜನರು ಹತಾಶರಾಗಿದ್ದಾರೆ. ಪರಿಸ್ಥಿತಿ ಇನ್ನೂ ವಿಕೋಪಕ್ಕೆ ತಲಪುವ ಮೊದಲು ಜನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದರು.

ಉಡುಪಿ-ಚಿಕ್ಕಮಗಳೂರು ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮಾತನಾಡಿ, ಈ ಹಿಂದೆಯೂ ಅವಕಾಶ ನೀಡಿದ್ದೀರಿ, ಆಗ ಅಲ್ಪ ಅವಧಿಯಲ್ಲಿಯೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವೆ. ಈಗ ಮತ ಕೇಳಲು ಹೋದಾಗ ಜನ ಅತ್ಯಂತ ಪ್ರೀತಿಯಿಂದ ಸ್ವಾಗತಿಸುತ್ತಿದ್ದಾರೆ. ಜನರು ಬದಲಾವಣೆ ಬಯಸಿದ್ದಾರೆ. ಎಲ್ಲರೂ ಒಮ್ಮತದಿಂದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕಾದ ಅಗತ್ಯ ಎದುರಾಗಿದೆ’ ಎಂದರು.