BlogHighlightsLocal newsObituaryOthersPoliticsReligionState newsTrending

ಬೈಂದೂರು ಬಿಜೆಪಿಗೆ 1 ಲಕ್ಷ ಲೀಡ್ : ಕೊಲ್ಲೂರಿನಲ್ಲಿ ಸಾಮೂಹಿಕ ಪ್ರಾರ್ಥನೆ

Aware others:

ಬೈಂದೂರು: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿಯೇ ಬಿಜೆಪಿಗೆ ಒಂದು ಲಕ್ಷ ಲೀಡ್ ಸಂಕಲ್ಪಕ್ಕೆ ಚಾಲನೆ ದೊರಕಿದೆ. ಎಪ್ರಿಲ್ 18ರಂದು ಪಕ್ಷದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಬೈಂದೂರಿನಲ್ಲಿ ಸಾಮೂಹಿಕ ಪ್ರಾರ್ಥನೆ ಆರಂಭಗೊಂಡಿದೆ. ಆ ಮೂಲಕ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆಯವರ ಸಂಕಲ್ಪಕ್ಕೆ ಶಕ್ತಿ ತುಂಬಲು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಬಿಜೆಪಿ ಯುವಮೋರ್ಛಾ ತಂಡದಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಗಿಯಿತು.

ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಯುವಮೋರ್ಛಾ ಅಧ್ಯಕ್ಷ ಗಜೇಂದ್ರ ಬೇಲೆಮನೆ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಪಿ ಬೈಂದೂರ್ ಹಾಗೂ ಅನುರ ಮೆಂಡನ್ ಮತ್ತು ಯುವಮೋರ್ಛಾ  ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಸೋಮಯ್ಯ ಮತ್ತು ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!