BlogHighlightsLocal newsNational NewsOthersPoliticsState newsTrending

ರಾಜ್ಯದ 28 ಕ್ಷೇತ್ರವೂ ಬಿಜೆಪಿ ಪಾಲು: ಬಿ.ಎಸ್.ಯಡಿಯೂರಪ್ಪ

Aware others:

ಬೈಂದೂರು: ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಹಾಗೆಯೇ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಈ ದೇಶದ ಪ್ರಧಾನ ಮಂತ್ರಿಯಾಗುವುದು ಅಷ್ಟೇ ಸತ್ಯ. ದೇಶದಲ್ಲಿ ಬಿಜೆಪಿ 400 ಅಧಿಕ ಸೀಟ್ ಗೆಲ್ಲಲಿದೆ. ಕರ್ನಾಟಕದಲ್ಲಿ 28ಕ್ಕೆ 28 ಸೀಟುಗಳನ್ನು ಗೆಲ್ಲುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಬೈಂದೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಬೃಹತ್ ರೋಡ್ ಶೋಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತಿದ್ದೇನೆ. ಎಲ್ಲೆಡೆ ಬಿಜೆಪಿ ಅಲೆ, ಮೋದಿ ಅಲೆ ಎದ್ದಿದೆ. ಶಿವಮೊಗ್ಗ ಕ್ಷೇತ್ರದಿಂದ ಬಿ.ವೈ.ರಾಘವೇಂದ್ರ ಅವರು ಕನಿಷ್ಠ 3ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಸಾಧಿಸಲಿದ್ದಾರೆ. ಬೈಂದೂರಿನಿಂದಲೇ 1 ಲಕ್ಷಕ್ಕೂ ಅಧಿಕ ಲೀಡ್  ಬರುವ ವಿಶ್ವಾಸವಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ. ವಿಶ್ವವೇ ಮೆಚ್ಚಿದ ನರೇಂದ್ರ ಮೋದಿಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು ಎಂದು ಎಲ್ಲರೂ ಬಯಸಿದ್ದಾರೆ. ಹೀಗಾಗಿ ನೂರಕ್ಕೆ ನೂರು ರಾಘವೇಂದ್ರ ಅವರು ಅತ್ಯಧಿಕ ಅಂತರದಲ್ಲಿ ಗೆಲ್ಲಿದ್ದಾರೆ ಎಂದರು.


Aware others:

Leave a Reply

Your email address will not be published. Required fields are marked *

error: Content is protected !!