BlogHighlightsLocal newsNational NewsOthersPoliticsState newsTrending

ಬೈಂದೂರು: ದಕ್ಷಿಣ ಕನ್ನಡ ಕಾಂಗ್ರೆಸ್ ನಿಂದ ಬೈಂದೂರಿನಲ್ಲಿ ಚುನಾವಣಾ ಪ್ರಚಾರ

Aware others:

ಬೈಂದೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದಕ್ಷಿಣ ಕನ್ನಡ ಮತ್ತು ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಮುಗಿದಿದ್ದು ಮೇ 7ರಂದು ನಡೆಯಲಿರುವ ಬೈಂದೂರು – ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಕಣ ಕಾವೇರುತ್ತಿದೆ. ಚುನಾವಣೆಗೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ ಬೈಂದೂರು ಕ್ಷೇತ್ರ ರಂಗೇರುತ್ತಿದ್ದು ದಕ್ಷಿಣ ಕನ್ನಡ ಕಾಂಗ್ರೆಸ್ ಮುಖಂಡರು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮನೆಮನೆ ಪ್ರಚಾರದಲ್ಲಿ ತೊಡಗಿದ್ದಾರೆ. 

ಬೈಂದೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಮಾತುಕತೆ ನಡೆಯಿತು. ಬಳಿಕ ಬೈಂದೂರು ಸಮೀಪದ ಗೋಳಿಹೊಳೆ, ಎಳಜಿತ್ ಮೊದಲಾದ ಪ್ರದೇಶಗಳಲ್ಲಿ ಹಾಗೂ ಸಿದ್ದಾಪುರ, ಹೊಸಂಗಡಿ ಮೊದಲಾದ ಪ್ರದೇಶಗಳಲ್ಲಿ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡರಿಂದ ಅಬ್ಬರದ ಮತ ಪ್ರಚಾರ ಹಾಗೂ ಕಾರ್ಯಕರ್ತರ ಸಭೆ ನಡೆಯಿತು. 

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಎಂಎಲ್ಎ ಅಭ್ಯರ್ಥಿ ರಕ್ಷಿತ್ ಶಿವರಾಂ, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಹಾಗೂ ಒಕ್ಕಲಿಗ ಸಂಘದ ಮುಖಂಡ ಕಿರಣ್ ಬುಡ್ಲೇಗುತ್ತು, ಕಾರ್ಕಳದ ರಾಜು ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದಶ್ರಿ ಯಂ ಸ್ ಮಹಮ್ಮದ್, ಪ್ರವೀಣ್ ಚಂದ್ರ ಆಳ್ವ ಪುತ್ತೂರು ಮೊದಲಾದವರು ಚುನಾವಣಾ ಪ್ರಚಾರದಲ್ಲಿ ಭಾಗಿಯಾದರು. ಬೈಂದೂರು ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಸದಾಶಿವ ಪಡುವರಿ ಮೊದಲಾದವರು ಮತ ಭೇಟಿಯಲ್ಲಿ ಸಹಕರಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!