BlogEducationHighlightsLocal newsNational NewsState newsSuccess storiesTechTop StoriesTrendingWorld

ಐ.ಸಿ.ಎಸ್.ಇ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಸಿದ್ಧಿವಿನಾಯಕ ವಸತಿ ಶಾಲೆಗೆ ಶೇ.100 ಫಲಿತಾಂಶ

Aware others:

ಕಳೆದ 21 ವರ್ಷಗಳಿಂದ ಶೇ. 100 ಫಲಿತಾಂಶ ಕಾಯ್ದುಕೊಂಡ ಶಾಲೆ

ಕುಂದಾಪುರ: ಕಳೆದ ಶೈಕ್ಷಣಿಕ ವರ್ಷದಲ್ಲಿ ನಡೆದ ಐ ಸಿ ಎಸ್ ಇ ಕೇಂದ್ರೀಯ ಪಠ್ಯಕ್ರಮದಲ್ಲಿ 10ನೇ ತರಗತಿ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕಿನ ಶ್ರೀ ಸಿದ್ದಿ ಶೈಕ್ಷಣಿಕ ಪ್ರತಿಷ್ಟಾನ, ಹಟ್ಟಿಯಂಗಡಿಯ ಆಶ್ರಯದಲ್ಲಿ ನಡೆಯುತ್ತಿರುವ ರಜತ ವರ್ಷದ ಸಂಭ್ರಮದಲ್ಲಿ ಎರಡು ಗಿನ್ನಿಸ್ ಪ್ರಶಸ್ತಿ ಪುರಸ್ಕೃತ ಶ್ರೀ ಸಿದ್ದಿವಿನಾಯಕ ವಸತಿ ಶಾಲೆ ಶೇ. 100 ಫಲಿತಾಂಶ ದಾಖಲಿಸಿ ತಾಲೂಕಿಗೆ ಹೆಮ್ಮೆ ತಂದಿದೆ.

ಕಳೆದ ಸಾಲಿನ ಅಂದರೆ 2023-24ನೇ ಶೈಕ್ಷಣಿಕ ವರ್ಷದ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶವನ್ನು ಪಡೆಯುವುದರ ಮೂಲಕ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿಶೇಷವೆಂದರೆ ಈ ಶಾಲೆ ಕಳೆದ 21 ವರ್ಷಗಳಿಂದಲೂ ನಿರಂತರವಾಗಿ ಈ ದಾಖಲೆಯನ್ನು ಕಾಯ್ದುಕೊಂಡಿದೆ! ಆ ಮೂಲಕ 21ನೇ ಬಾರಿ ಶೇಕಡ 100 ಫಲಿತಾಂಶವನ್ನು ದಾಖಲಿಸಿದ ಕುಂದಾಪುರ ತಾಲೂಕಿನ ಏಕೈಕ ಶಾಲೆ ಎಂಬ ಹಿರಿಮೆಗೆ ಪಾತ್ರವಾಗಿದೆ. 

ರಾಜ್ಯ ಹಾಗೂ ಹೊರರಾಜ್ಯಗಳ ಸುಮಾರು 1730ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಆ ಪೈಕಿ 582 ಮಕ್ಕಳಿಗೆ ಸುಸಜ್ಜಿತ ಹಾಸ್ಟೆಲ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ತನ್ವಿಶ್ರೀ ಎಸ್. ಆಚಾರ್ ಮತ್ತು ಮಾನ್ಯ ಪೂಜಾರಿ 97.4 ಶೇಕಡಾ ಅಂಕದೊಂದಿಗೆ ಪ್ರಥಮ, ಜ್ಞಾನದೀಪ್ ವಿ. ಶೆಟ್ಟಿ 96 ಶೇಕಡಾ ಅಂಕದೊಂದಿಗೆ ದ್ವಿತೀಯ, ಪಾವನಿ ಪಾಟೀಲ್ 95.8 ಶೇಕಡಾ ಅಂಕದೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ಕಳೆದ ಶೈಕ್ಷೀಕ ವರ್ಷದಲ್ಲಿ ಪರೀಕ್ಷೆಗೆ ಹಾಜರಾದ 173 ವಿದ್ಯಾರ್ಥಿಗಳಲ್ಲಿ 119 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ 54 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಸಂಸ್ಥೆಗೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳನ್ನು ಹಾಗೂ ಸಂಸ್ಥೆಯ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗದವರನ್ನು ಆಡಳಿತ ಮಂಡಳಿ ಕಾರ್ಯದರ್ಶಿ, ಪ್ರಾಂಶುಪಾಲ ಶರಣ ಕುಮಾರ ಅಭಿನಂದಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!