ಹಾಸನ: ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ: ಹಾಸನದ ಪದವಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯ ಸೋಮಶೇಖರ್ ಹಾಗೂ ಭಾಗ್ಯ ದಂಪತಿಗಳ ಅವಿವಾಹಿತ ಪುತ್ರಿ ದೀಪಾ (34) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಓದಿನಲ್ಲಿ ಮುಂದಿದ್ದ ದೀಪಾ ಸ್ಥಳೀಯವಾಗಿಯೇ ತನ್ನ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದು, ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿ ಆಗಿ ಸೇವೆ ಸಲ್ಲಿಸುತ್ತಿದ್ದಳು. ಆದರೆ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದು, ಕುಟುಂಬಸ್ಥರಲ್ಲಿ ಆಘಾತ ತಂದೊಡ್ಡಿದೆ. ಇಒ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
