AccidentBlogCrime newsHighlightsLocal newsNational NewsState newsTrending

ಬಂದ್ಯೋಡು: ಕಂಟೈನರ್ ಲಾರಿ – ಬಸ್‌ ಮುಖಾಮುಖಿ ಢಿಕ್ಕಿ, ನಾಲ್ವರಿಗೆ ಗಾಯ

Aware others:

ಕಾಸರಗೋಡು: ಖಾಸಗಿ ಬಸ್ ಹಾಗೂ ಕಂಟೈನರ್ ಲಾರಿ ಮುಖಾಮುಖಿಯಾಗಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ಸುಮಾರು 8.45ಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಂದ್ಯೋಡು ಸಮೀಪದ ಉಪ್ಪಳ ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಬಸ್ಸು ಚಾಲಕ ಉಪ್ಪಳದ ಅಶ್ರಫ್‌ ಗಂಭೀರ ಗಾಯಗೊಂಡಿದ್ದರೆ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಖಾಸಗಿ ಬಸ್ಸು ತಲಪಾಡಿಯಿಂದ ಕಾಸರಗೋಡಿಗೆ ಹಾಗೂ ಲಾರಿ ಮಂಗಳೂರು ಕಡೆಗೆ ತೆರಳುತ್ತಿತ್ತು. ಪ್ರಯಾಣಿಕರನ್ನು ಇಳಿಸಲು ರಸ್ತೆ ಬದಿ ನಿಲ್ಲಿಸಿದ್ದ ಬಸ್ಸನ್ನು ಓವ‌ರ್ ಟೇಕ್ ಮಾಡಿ ಸಾಗುವ ರಭಸದಲ್ಲಿ ಸೇಫ್ ಎಕ್ಸ್ ಪ್ರೆಸ್ ಹೆಸರಿನ ಕಂಟೈನರ್ ಲಾರಿ ಮುಂದಿನಿಂದ ಬರುತ್ತಿದ್ದ ಮತ್ತೊಂದು ಬಸ್ಸಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಇದರ ನಡುವೆ ಸಿಲುಕಿದ್ದ ಚಾಲಕನನ್ನು ಹೊರತೆಗೆಯಲು ಸ್ಥಳದಲ್ಲಿದ್ದವರು ಹರಸಾಹಸ ಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಅಪಘಾತದ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಸ್ಥಳಕ್ಕೆ ಆಗಮಿಸಿದ ಕುಂಬ್ಳೆ ಪೊಲೀಸರು ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ

ವಿಡಿಯೋ ನೋಡಲು ಇಲ್ಲಿ ಕ್ಲಿಕ್ಕಿಸಿ 👇


Aware others:

Leave a Reply

Your email address will not be published. Required fields are marked *

error: Content is protected !!